July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡೋಣ – ಮಟ್ಟಾರು ವಿಠಲ ಕಿಣಿ

ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹನೀಯರ ಸ್ಮರಣೆಯೊಂದಿಗೆ ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡುವ ಮನೋಭಾವ ಇರಲಿ ಎಂದು ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿ ಕರೆ ನೀಡಿದರು.

ಅವರು ಆಗಸ್ಟ್ 14ರಂದು ಗುರುವಾರ ನಗರದ ಕಾಪಿಕಾಡ್ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಎಳೆಯ ಮಕ್ಕಳಿಗೆ ಸ್ವಾತಂತ್ರ್ಯ ಮುನ್ನಾದಿನ ತ್ರಿವರ್ಣ ಧ್ವಜ ಸಿಹಿ ತಿಂಡಿ, ಉಡುಗೊರೆ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಸುವರ್ಣ ಸಂಭ್ರಮ ಸಮಿತಿ ಪ್ರಧಾನ ಸಂಚಾಲಕ ಪಿ.ಬಿ. ಹರೀಶ್ ರೈ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ. ಎನ್., ಕಾಪಿಕಾಡ್ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಲೀನಾ ಡಿಸೋಜ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸಿಂಧು, ಅಂಗನವಾಡಿ ಶಿಕ್ಷಕಿ ನಂದಾ, ಸಹಾಯಕಿ ಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page