April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಿಯಮ ಪಾಲಿಸದೇ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ಮುಲಾಜಿಲ್ಲದೆ ಒಡೆದು ಹಾಕಲಾಗುತ್ತದೆ – ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್

ಸುರಕ್ಷಿತ ನಿಯಮಗಳನ್ನು ಪಾಲಿಸದೇ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ದುರಸ್ತಿ ಮಾಡಿಕೊಳ್ಳಬೇಕು. ಇಲ್ಲವಾದರೆ ಮುಲಾಜಿಲ್ಲದೆ ಒಡೆದು ಹಾಕುತ್ತೇವೆ ಎಂದು ನಗರಾಭಿವೃದ್ಧಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಗರ್ತಪೇಟೆಯಲ್ಲಿ ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಶೇಕಡಾ 70 ರಷ್ಟು ಕಟ್ಟಡಗಳ ನಿರ್ಮಾಣ ಅಕ್ರಮವಾಗಿದೆ. ಹಳೆಯ ಬಡಾವಣೆಗಳಷ್ಟೇ ಅಲ್ಲ, ಹೊಸ ಬಿಡಿಎ ಬಡಾವಣೆಗಳಲ್ಲೂ ಒಂದು ಮತ್ತು ನಾಲ್ಕು ಮಹಡಿಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.


ಸ್ವಾಧೀನ ಪತ್ರ ಇಲ್ಲದೆ ಇರುವವರಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರ ಪ್ರಕಾರ 4 ಲಕ್ಷ ಸಂಪರ್ಕಗಳನ್ನು ಸ್ಥಗಿತಗೊಳಿಸಲಾಗಿದೆ. 30-40 ಅಡಿ ವಿಸ್ತೀರ್ಣದ ನಿವೇಶನದಲ್ಲಿ ಎರಡು ಮಹಡಿಗಳ ನಿರ್ಮಾಣಕ್ಕೆ ವಿನಾಯಿತಿ ನೀಡಬೇಕೆಂಬ ಚಿಂತನೆ ಇದೆ. ಸಚಿವ ಸಂಪುಟದಲ್ಲಿ ಇತರ ಸಚಿವರು ಯಾವ ರೀತಿಯ ಅಭಿಪ್ರಾಯ ವ್ಯಕ್ತ ಪಡಿಸುತ್ತಾರೆ ಎಂಬುದನ್ನು ಗಮನಿಸಿ ನಂತರ ನಾನು ಮತ್ತು ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

You may also like

News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ

You cannot copy content of this page