ಯೂಟ್ಯೂಬರ್ ಸಮೀರ್ ಎಂ.ಡಿ. ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ
ಧರ್ಮಸ್ಥಳ ಗ್ರಾಮದ ಪ್ರಕರಣಗಳಿಗೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಗೆ ಬೆಳ್ತಂಗಡಿ ಠಾಣೆಗೆ ಆಗಸ್ಟ್ 23ರಂದು ಶನಿವಾರ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು, ಕಾಲ್ಪನಿಕ ಮಾಹಿತಿಗಳನ್ನು ಮಾಡಿಟ್ಟು ದೂತ ಎಂಬ ಯೂಟ್ಯೂಬ್ ನಲ್ಲಿ ಸಮೀರ್ ಎಂ.ಡಿ. ವಿಡಿಯೋ ಪ್ರಸಾರ ಮಾಡಿದ ಬಗ್ಗೆ ಜುಲಾಯ್ 12ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಈ ಬಗ್ಗೆ ಧರ್ಮಸ್ಥಳ ಪೊಲೀಸರು ಮೂರು ಬಾರಿ ನೋಟಿಸ್ ನೀಡಿದರೂ ಸಮೀರ್ ಎಂ.ಡಿ. ವಿಚಾರಣೆಗೆ ಹಾಜರಾಗದೆ ಇರುವ ಕಾರಣ ಆಗಸ್ಟ್ 21ರಂದು ಗುರುವಾರ ಧರ್ಮಸ್ಥಳ ಪೊಲೀಸರು ಬೆಂಗಳೂರಿನಲ್ಲಿರುವ ಬಾಡಿಗೆ ಮನೆಯಿಂದ ಆತನನ್ನು ಬಂಧಿಸಲು ಹೋಗಿದ್ದು ಈ ವೇಳೆಗೆ ಅದೇ ದಿನ ಸಂಜೆ ಸಮೀರ್ ಎಂ.ಡಿ. ಮಂಗಳೂರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ನಿರೀಕ್ಷಣಾ ಜಾಮೀನು ನೀಡುವ ವೇಳೆ ನ್ಯಾಯಾಲಯವು ಪೊಲೀಸರ ವಿಚಾರಣೆಗೆ ಹಾಜರಾಗಬೇಕು, ಸಾಕ್ಷಿ ನಾಶ ಮಾಡಬಾರದೆಂದು ಕೆಲವು ಷರತ್ತು ವಿಧಿಸಿತ್ತು. ಅದರಂತೆ ಧರ್ಮಸ್ಥಳ ಪೊಲೀಸರ ವಿಚಾರಣೆ ಬಾಕಿ ಇರುವ ಕಾರಣದಿಂದ ಆಗಸ್ಟ್ 22ರಂದು ಮತ್ತೆ ಸಮೀರ್ ಎಮ್.ಡಿ. ಗೆ ವಿಚಾರಣೆಗೆ ಆಗಸ್ಟ್ 23ರಂದು ಶನಿವಾರ 10 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್ ಜಾರಿ ಮಾಡಿದ್ದಾರೆ.




