August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ಬಾಲ್ ಪಂದ್ಯಾಟ

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು ದಕ್ಷಿಣ ಕನ್ನಡ ಹಾಗೂ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಫುಟ್ ಬಾಲ್ ಪಂದ್ಯಾಟವು ಜರಗಿತು. ಮಡಂತ್ಯಾರು ಸೇಕ್ರೆಡ್ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಪಡ್ಪು ಪಂದ್ಯಾಟವನ್ನು ಉದ್ಘಾಟಿಸಿದರು. ಪುಟ್ಬಾಲ್ ಆಟ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ನೀಡುವುದರ ಜೊತೆಗೆ ಶಾರೀರಿಕ ಹತೋಟಿಯನ್ನು ನೀಡುತ್ತದೆ. ಪುಟ್ಬಾಲ್ ವಿಶ್ವದಲ್ಲೇ ಪ್ರಥಮ ಸ್ಥಾನ ಪಡೆದ ಕ್ರೀಡೆಯಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಎರಡನ್ನು ಸ್ವೀಕರಿಸುವ ಮನೋಭಾವವನ್ನು ಕ್ರೀಡಾ ಪಟುಗಳು ಬೆಳೆಸಿಕೊಳ್ಳಬೇಕು. ತಾಲೂಕು ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಪಟುಗಳು ಸಾಧನೆ ಮಾಡುವಂತಾಗಲೆಂದು ಅವರು ಶುಭಹಾರೈಸಿದರು.

ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂದನಿಯ ಡಾ. ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್ ಸ್ವಾಗತಿಸಿ ಉಪನ್ಯಾಸಕರಾದ ವಸಂತ್ ಶೆಟ್ಟಿ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಫಲಿತಾಂಶ: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರು ಪ್ರಥಮ ಸ್ಥಾನ ಹಾಗೂ ಎಸ್.ಡಿ.ಎಂ. ಪಿಯು ಕಾಲೇಜು ಉಜಿರೆ ದ್ವಿತೀಯ ಸ್ಥಾನ ಪಡೆಯಿತು.  ಸಮಾರೋಪ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್ ಬಹುಮಾನ ವಿತರಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಿಸ್ ಫೆರ್ನಾಂಡಿಸ್ ಹಾಗೂ ಸಂಜಿತ್ ಕುಮಾರ್ ಶೆಟ್ಟಿ, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಪಂದ್ಯಾಟದ ಯಶಸ್ಸಿಗೆ ಸಹಕರಿಸಿದರು.

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ:- ಬೆಳ್ತಂಗಡಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ  ಪುಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಅಂತಿಮ ಪಂದ್ಯಾಟದಲ್ಲಿ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ತಂಡವನ್ನು  ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page