ಬಿ.ಎಲ್. ಸಂತೋಷ್ ವಿರುದ್ದ ಅವಹೇಳನಕಾರಿ ಹೇಳಿಕೆ – ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ
ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಅರೆಸ್ಟ್ ಆಗಿರುವ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಇಂದು ಆಗಸ್ಟ್ 23ರಂದು ಶನಿವಾರ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.


ಬಿ.ಎಲ್. ಸಂತೋಷ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಹೇಶ್ ತಿಮರೋಡಿ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನಲೆ ಬ್ರಹ್ಮಾವರ ಪೊಲೀಸರು ಉಜಿರೆಯ ತಿಮರೋಡಿ ನಿವಾಸಕ್ಕೆ ತೆರಳಿ ಅವರನ್ನು ಬಂಧಿಸಿದ್ದರು. ಅದೇ ದಿನ ಪೊಲೀಸರು ನ್ಯಾಯಾಧೀಶರ ಎದುರು ಅವರನ್ನು ಹಾಜರುಪಡಿಸಿದ್ದು ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಆದರೆ ಇದೀಗ ಉಡುಪಿ ಜಿಲ್ಲಾ ನ್ಯಾಯಾಲಯವು ಜಾಮೀನು ಅರ್ಜಿಯ ವಿಚಾರಣೆ ನಡೆಸಿ ನ್ಯಾಯಾಧೀಶರು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.




