August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಲ್ದನೆ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನವನ್ನು ಆಚರಿಸಲಾಯಿತು. ಚರ್ಚ್ ಧರ್ಮಗುರು ವಂದನೀಯ ಫಾದರ್ ರಿಚ್ಚರ್ಡ್ ಅಲೋಶಿಯಸ್ ಕುವೆಲ್ಲೊರವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಮಾತೃ ಭಾಷೆಯವರು ತಮ್ಮ ಮನೆಗಳಲ್ಲಿ ಕೊಂಕಣಿಯಲ್ಲಿಯೇ ಮಾತನಾಡುವ ಮೂಲಕ ಈ ಭಾಷೆಯನ್ನು ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರೋಯ್ ಕ್ಯಾಸ್ತೆಲಿನೊರವರು  ಮಾತನಾಡಿ ಕೊಂಕಣಿ ಮಾನ್ಯತೆ ಲಭಿಸಿದ ಕುರಿತಂತೆ ಮಾಹಿತಿ ನೀಡಿ ನಮ್ಮ ಮಾತೃ ಭಾಷೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ದಾಟಿಸಲು ಎಲ್ಲರೂ ಮುಂದಾಗಬೇಕು ಎಂದು ಸಲಹೆ ನೀಡಿದರು.

ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಸ್ವಾಗತಿಸಿದರು. ಕೊಂಕಣಿ ಮಾನ್ಯತಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಗಾಯನ ಮತ್ತು ಕವಿತಾ ವಾಚನ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಕುರಿತಂತೆ ವಿಶಿಷ್ಟ ರೀತಿಯ ಸೇವೆ ಸಲ್ಲಿಸಿದ ಚರ್ಚಿನ ಸದಸ್ಯ ಚಾರ್ಲ್ಸ್ ಫೆರ್ನಾಂಡಿಸ್ ರವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಚರ್ಚ್ ನ ಸರ್ವ ಆಯೋಗಗಳ ಸಂಚಾಲಕ ಜೋಸ್ಲಿನ್ ಲೋಬೊ, ಎರಡು ಕಾನ್ವೆಂಟ್ ಗಳ ಸುಪೀರಿಯರ್ ಗಳಾದ ಭಗಿನಿ ಮೊಂತಿ ಮತ್ತು ಭಗಿನಿ ವಿಭಾ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಪ್ಯಾಟ್ಸಿ ಮೊಂತೇರೊ ಉಪಸ್ಥಿತರಿದ್ದರು. ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ವಂದಿಸಿದರು. ರೋಶನ್ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page