September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) – ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ

ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ್ಹಾ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು ಸತತ ಲಾಭಗಳಿಕೆಯೊಂದಿಗೆ, ಸದಸ್ಯರಿಗೆ ಸತತ 20% ಡಿವಿಡೆಂಡ್ ನೀಡುತ್ತಾ ಬರುತ್ತಿದೆ. ಸರ್ಕಾರದ ಅಡಿಟ್ ವರ್ಗೀಕರಣದಲ್ಲಿ ಸತತ ‘ಎ’ ವರ್ಗ ಪಡೆಯುವುದರೊಂದಿಗೆ ಉತ್ತಮ ಅಭಿವೃದ್ಧಿಗೆ ಎಸ್.ಡಿ.ಸಿ.ಸಿ. ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಸತತ ಪಡೆಯುತ್ತಾ ಬರುತ್ತಿದೆ.

ಎಲ್ಲಾ ಶಾಖೆಗಳು ಕಂಪ್ಯೂಟರಿಕೃತ ಲೆಕ್ಕ-ಪತ್ರ ವ್ಯವಸ್ಥೆ ಎಲ್ಲಾ ಭದ್ರತಾ ವ್ಯವಸೆಗಳೊಂದಿಗೆ ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ನೀಡುತ್ತಾ ಬರುತ್ತಿದೆ. ಬೆಳ್ತಂಗಡಿ ಶಾಖೆಯು ಆರಂಭದ ಕೊಡುಗೆಯಾಗಿ ಸಾಮಾನ್ಯ ಠೇವಣಿ 1 ವರ್ಷಕ್ಕೆ 8.50%, 2 ವರ್ಷಕ್ಕೆ 9%, 3 ವರ್ಷಕ್ಕೆ 9.50% ಹಾಗೂ ಹಿರಿಯ ನಾಗರಿಕರಿಗೆ 1 ವರ್ಷಕ್ಕೆ 9%, 2 ವರ್ಷಕ್ಕೆ 9.50%, 3 ವರ್ಷಕ್ಕೆ 10% ನೀಡುತ್ತಿದ್ದು ಗ್ರಾಹಕ ಬಂಧುಗಳು ಕೆಲವೇ ದಿನಗಳ ಅವಧಿ ನೀಡುವ ಈ ಕೊಡುಗೆಯ ಸದುಪಯೋಗ ಪಡೆದುಕೊಳ್ಳಲು ಸೊಸೈಟಿಯ ಪ್ರಕಟಣೆಯಲ್ಲಿ ಕೋರಲಾಗಿದೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page