July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಿಗದಿತ ಸಮಯದೊಳಗೆ ಆಸ್ತಿ ಘೋಷಣೆ ಮಾಡದಿದ್ದರಿಂದ ಸದಸ್ಯತ್ವ ರದ್ದು

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಹಾಗೂ ಬೆಳ್ಳಾರೆ ಗ್ರಾಮ ಪಂಚಾಯತ್ 1ನೇ ವಾರ್ಡ್‌ನ ಚುನಾಯಿತ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ರವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ.

ರಾಜ್ಯ ಚುನಾವಣಾ ಆಯೋಗವು ನೀಡಿದ ಉಲ್ಲೇಖದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಕಲಂ 43(ಬಿ)(4)ರಡಿ, ಅವರು ನಿಗದಿತ ಅವಧಿಯೊಳಗೆ ಆಸ್ತಿ ಮತ್ತು ಹೊಣೆಗಾರಿಕೆಗಳ ಘೋಷಣೆಯನ್ನು ಸಲ್ಲಿಸದಿರುವ ಕಾರಣ ಸದಸ್ಯ ಸ್ಥಾನವನ್ನು ಕಳೆದುಕೊಂಡಿದ್ದಾನೆ.

ಇಕ್ಬಾಲ್ ಪ್ರಸ್ತುತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಇದರಿಂದಾಗಿ ಅವನ ಸದಸ್ಯ ಸ್ಥಾನವನ್ನು ಖಾಲಿ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page