ತಮ್ಮನ ಕೈಯಲ್ಲಿದ್ದ ಏರ್ ಗನ್ ನಿಂದ ಸಿಡಿದ ಗುಂಡು ಅಣ್ಣ ಸಾವು
ಅಣ್ಣ ಮತ್ತು ತಮ್ಮ ಏರ್ ಗನ್ ನಲ್ಲಿ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ತಮ್ಮನ ಕೈಯಿಂದ ಗುಂಡು ಹಾರಿ ಅಣ್ಣ ಮೃತಪಟ್ಟಿದ್ದಾನೆ. ಈ ಹೃದಯ ವಿದ್ರಾವಕ ಘಟನೆ ಶಿರಸಿಯಲ್ಲಿ ನಡೆದಿದೆ. ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬವರ ಇಬ್ಬರು ಮಕ್ಕಳು ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.
7 ವರ್ಷದ ತಮ್ಮನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದು, ಅಣ್ಣ 9 ವರ್ಷದ ಕರಿಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತಿದ್ದಾರೆ.




