August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಗೊಳಿಸುವುದಾಗಿ ಬೆದರಿಕೆ – ಆರೋಪಿಯ ಬಂಧನ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಸ್ಟ್ 29ರಂದು ಮಂಗಳವಾರ ರಾತ್ರಿ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಡ್ಯೂಟಿ ಟರ್ಮಿನಲ್ ಮ್ಯಾನೇಜರ್ ರವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆ ಮಾಡಿದವನು ತಮಿಳುನಾಡು ರಾಜ್ಯದ ವೆಲ್ಲೂರು ಜಿಲ್ಲೆಯ ನಿವಾಸಿ 38 ವರ್ಷ ಪ್ರಾಯದ ಶಶಿಕುಮಾರ್ ಎಂದು ತಿಳಿದುಬಂದಿದ್ದು ಆತನನ್ನು ತಮಿಳುನಾಡಿನ ವೆಲ್ಲೂರ್ ನಲ್ಲಿ ವಶ ಪಡೆಯಲಾಗಿದೆ. ಈತನ ಮೇಲೆ ಮೊ.ನಂ 156/2025 ಕಲಂ:- 351(2), 351(3) BNS U/s:- 3(1)d Suppression of unlawful acts against safety of civil aviation act 1982 ಪ್ರಕರಣ ದಾಖಲಿಸಿಕೊಂಡು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಆರೋಪಿಯನ್ನು ವಿಚಾರಣೆ ನಡೆಸಿದಾಗ ಈತನು ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಮೊಬೈಲ್ ನಂಬ್ರವನ್ನು ಸಾಮಾಜಿಕ ಜಾಲತನದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಅದೇ ತರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಲು ತಿಳಿಸಿ ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್ ಅನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ತಿಳಿದುಬಂದಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page