ಪೆನ್ನಿನ ವಿಚಾರಕ್ಕೆ ಗಲಾಟೆ – ಕಣ್ಣು ಗುಡ್ಡೆಯನ್ನೇ ಕಳೆದುಕೊಂಡ ವಿದ್ಯಾರ್ಥಿ
ಪೆನ್ನಿನ ವಿಚಾರಕ್ಕೆ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿ ಅದರಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಒಂದನೇ ತರಗತಿ ವಿದ್ಯಾರ್ಥಿಗೆ ಐದನೇ ತರಗತಿ ವಿದ್ಯಾರ್ಥಿ ಪೆನ್ ನೀಡಿದ್ದ. ಅದನ್ನು ವಾಪಾಸ್ ಕೇಳಿದ್ದಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ 1ನೇ ತರಗತಿ ವಿದ್ಯಾರ್ಥಿ ಕಟ್ಟಿಗೆಯಿಂದ 5ನೇ ತರಗತಿ ವಿದ್ಯಾರ್ಥಿಯ ಬಲಗಣ್ಣಿಗೆ ಇರಿದಿದ್ದಾನೆ.


ಇದರಿಂದ ತೀವ್ರ ಗಾಯಗೊಂಡಿರುವ 5ನೇ ತರಗತಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ. ಕಣ್ಣು ಕಳೆದುಕೊಂಡ ಈ ವಿದ್ಯಾರ್ಥಿಗೆ ಸರಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಲಾಗಿದೆ.




