July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿಲಾಗ್ರಿಸ್ ಕಾಲೇಜಿನಲ್ಲಿ ‘ಮಿಲಾಗ್ರಿಸ್ ಬುಕ್ ಕ್ವೆಸ್ಟ್’ – ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ

ಓದುವ ಹವ್ಯಾಸವನ್ನು ಉತ್ತೇಜಿಸುವ ದಿಟ್ಟಿನಲ್ಲಿ ಸಹಕಾರಿಯಾಗುವ ಪುಸ್ತಕ ಮೇಳ

ಮಿಲಾಗ್ರಿಸ್‌ ಕಾಲೇಜು, ಮಂಗಳೂರು ಹಾಗೂ ಯೂಸ್ಡ್ ಬುಕ್ ಆರ್. (USED BOOKS R.) ಇದರ ಸಂಯುಕ್ತ ಆಶ್ರಯದಲ್ಲಿ ಒಂದು ವಾರದ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ ‘ಮಿಲಾಗ್ರಿಸ್ ಬುಕ್ ಕ್ವೆಸ್ಟ್’ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಸೆಪ್ಟೆಂಬರ್ 16ರಿಂದ 21ರ ವರೆಗೆ 3,000 ಕ್ಕಿಂತಲೂ ಹೆಚ್ಚು ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ. ಮಂಗಳೂರು ನಗರದ ವಿವಿಧ ಶಾಲಾ-ಕಾಲೇಜುಗಳು ಹಾಗೂ ಪುಸ್ತಕ ಪ್ರೇಮಿಗಳು ಈ ಪುಸ್ತಕ ಪ್ರದರ್ಶನ ಹಾಗೂ ಮಾರಾಟದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದು. ತಮಿಳುನಾಡಿನ ಕೊಯಂಬತ್ತೂರಿನ ತರುಣ್ ತೇಜಸ್ ಗಂಗಮ್ ಮತ್ತು ತಕ್ಷಿಣಿ ಅಶೋಕ್ ಕುಮಾರ್ ಇವರಿಂದ ಸ್ಥಾಪಿತವಾದ ಯೂಸ್ಡ್ ಬುಕ್ ಆರ್ ಸಂಸ್ಥೆ ದೇಶದಾದ್ಯಂತ ಪುಸ್ತಕ ಮಾರಾಟಕ್ಕೆ ಪ್ರಸಿದ್ಧಿಯನ್ನು ಗಳಿಸಿದೆ. ಜನರಲ್ಲಿ ಓದುವ ಹವ್ಯಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಡಿಮೆ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುತ್ತಿದೆ. ಪ್ರದರ್ಶನ ಮಳಿಗೆಯಲ್ಲಿ ಪುಸ್ತಕಗಳನ್ನು ಕಿಲೋ ದರದಲ್ಲಿ ಹೊಸ ಪುಸ್ತಕಗಳ ಮಾರಾಟ ಮಾಡುವ ವ್ಯವಸ್ಥೆಯೂ ಇದೆ ಎಂದು ಪ್ರಕಟಣೆ ತಿಳಿಸಿದೆ.

ಪುಸ್ತಕ ಪ್ರೇಮಿಗಳಿಗೆ ಈ ಪ್ರದರ್ಶನವು ಅನೇಕ ರೀತಿಯಲ್ಲಿ ಸಹಾಯಕವಾಗಲಿದೆ. ಅವರು ಅಪರೂಪದ ಮತ್ತು ಲಭ್ಯವಾಗಲು ಕಷ್ಟವಾದ ಪುಸ್ತಕಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನಕ್ಕೆ ಬೇಕಾದ ಪುಸ್ತಕಗಳನ್ನು ಕಡಿಮೆ ದರದಲ್ಲಿ ಕೊಂಡುಕೊಳ್ಳುವ ಅವಕಾಶವನ್ನು ಬಳಸಿಕೊಳ್ಳಬಹುದು. ಓದಿನ ಅಭ್ಯಾಸವನ್ನು ಬೆಳೆಸಿಕೊಳ್ಳಲು ಮತ್ತು ವಿವಿಧ ವಿಷಯಗಳ ಜ್ಞಾನವನ್ನು ವಿಸ್ತರಿಸಲು ಇದು ಉತ್ತಮ ವೇದಿಕೆಯಾಗಿ ಪರಿಣಮಿಸಲಿದೆ. ಜೊತೆಗೆ, ಹಳೆಯ ಪುಸ್ತಕಗಳಿಗೆ ಹೊಸ ಜೀವನ ನೀಡುವ ಮೂಲಕ ಪರಿಸರ ಸಂರಕ್ಷಣೆಯಲ್ಲಿಯೂ ಪುಸ್ತಕ ಪ್ರೇಮಿಗಳು ಪಾಲ್ಗೊಳ್ಳುವಂತಾಗುತ್ತದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page