November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರಕಾರದಿಂದ “ಮಾಸ್ಟರ್ ಪ್ಲಾನ್”

ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ

ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನು ”ಟೂರಿಸಂ ಹಬ್” ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಇಂದು ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಈ ಕುರಿತು ಶೀಘ್ರವೇ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಭೆ ಕರೆಯಲಾಗುವುದು. ಜಿಲ್ಲೆಗಳಲ್ಲಿ ಸಭೆ ನಡೆಸಲು ಜಿಲ್ಲಾಧಿಕಾರಿಗಳೇ ಮುಖ್ಯಸ್ಥರಾಗಿರುವುದರಿಂದ ಅವರ ಮೂಲಕ ಸಭೆ ಕರೆದು ಅದಕ್ಕೆ ಸದಸ್ಯರನ್ನು ಆಹ್ವಾನಿಸಿ, ಪ್ರವಾಸೋದ್ಯಮ ಚಟುವಟಿಕೆ ಗಳಿಗಾಗಿ ಅನುದಾನವನ್ನು ವಿನಿಯೋಗಿಸುವ ಬಗ್ಗೆ ಯೋಜನೆ ಮಾಡಲಾಗುವುದು ಮತ್ತು “ರಿವರ್ ಫೆಸ್ಟ್ರವಲ್” ಬಗ್ಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಜೀವಿಶಾಸ್ತ್ರ ಸಚಿವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸುವ ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತ್ರತ ಯೋಜನೆಯನ್ನು ತಯಾರಿಸಲು ಸರ್ಕಾರದ ಆದೇಶ ಸಂಖ್ಯೆ: ಟಿಓಆ‌ರ್/154/ಟಿಡಿಪಿ/2023, ಬೆಂಗಳೂರು 21.08.2024ರಂದು ಅನುಮೋದನೆಯನ್ನು ನೀಡಿರುತ್ತದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ರಸ್ತೆ ಬದಿ ಸೌಲಭ್ಯಗಳನ್ನು ಉನ್ನತೀಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಹಸ, ಪರಿಸರ, ಜಲಸಾರಿಗೆ ಹಾಗೂ ಕಡಲ ತೀರದ ಪ್ರವಾಸೋದ್ಯಮಗಳಿಗೆ ಲಭ್ಯವಿರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು ಎಂದು ಘೋಷಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ ಟಿಒಆರ್ 56 ಟಿಡಿಪಿ 2025, 23-07-2025 ಘೋಷಣೆಯನ್ನು ಅನುಷ್ಠಾನಗೊಳಿಸುವ ಪ್ರಸ್ತಾವನೆಗೆ ತಾತ್ವಿಕ ಅನುಮೋದನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಣ್ಣೀರುಬಾವಿ ಕಡಲ ತೀರದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಲು ಸಮಾಲೋಚಕ ಸಂಸ್ಥೆಯನ್ನು ಆಯ್ಕೆ ಮಾಡಲು ಟೆಂಡರ್ ಪ್ರಕಟಿಸಲಾಗಿದ್ದು, ಸದರಿ ಟೆಂಡರ್ ನ ತಾಂತ್ರಿಕ ಬಿಡ್ಡನ್ನು ದಿನಾಂಕ 07.08.2025 ರಂದು ತೆರೆಯಲಾಗಿದ್ದು, ಸದರಿ ಟೆಂಡರ್ ‌ನಲ್ಲಿ 3 ಬಿಡ್ಡುದಾರರು ಭಾಗವಹಿಸಿದ್ದು ಸದರಿ ಬಿಡ್ಡುದಾರರಿಗೆ ತಾಂತ್ರಿಕ ಪ್ರಾತ್ಯಕ್ಷಿಕೆ 29.08.2025 ರಂದು ಆಯೋಜಿಸಿದ್ದು. ಸದರಿ ಬಿಡ್ ಪರಿಶೀಲನಾ ಹಂತದಲ್ಲಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕೋಡಿಕಲ್, ಗುರುಪುರ ನದಿ ತೀರದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ವಹಿವಾಟು ಸಲಹೆಗಾರರನ್ನು ಆಯ್ಕೆ ಮಾಡಿಕೊಳ್ಳಲು Infrastructure Development Ports and inland Water Transport Department Government of karnataka (IDP & IWTD) ರವರೊಂದಿಗೆ ಏಂಪ್ಯಾನಲ್ ಆಗಿರುವ ಸಂಸ್ಥೆಗಳಿಗೆ ಮಾತ್ರ ಟೆಂಡರ್ ಪ್ರಕಟಿಸಿದ್ದು, ಸದರಿ ಟೆಂಡರ್ ನ Pre-Bid ಸಭೆಯಲ್ಲಿ ಏಂಪ್ಯಾನಲ್ಡ್ ಬಿಡ್ಡುದಾರರಿಗೆ ಪ್ರಕಟಿಸಿರುವ ಟೆಂಡರ್ ಬದಲಿಗೆ ಒಪನ್ ಟೆಂಡ‌ರ್ ಅನ್ನು ಪ್ರಕಟಿಸಿರುವಂತೆ ಬಿಡ್ಡುದಾರ ಸಂಸ್ಥೆಗಳು ಕೋರಿರುತ್ತಾರೆ. ಆದ್ದರಿಂದ ಸದರಿ ಟೆಂಡ‌ರ್ ಅನ್ನು ರದ್ದುಪಡಿಸಿದ್ದು, ಮತ್ತೊಮ್ಮೆ ಅತ್ಯಂತ ಜರೂರಾಗಿ ಟೆಂಡರ್ (Open Tender) ಅನ್ನು ಮರುಪ್ರಕಟಿಸಲಾಗಿದ್ದು, ಸದರಿ ಟೆಂಡರ್‌ನ ತಾಂತ್ರಿಕ ಬಿಡ್ಡನ್ನು 12.09.2025 ರಂದು ತೆರೆಯಲಾಗುವುದು.

ಉಡುಪಿ ಜಿಲ್ಲೆಯ ಸದರಿ ಮೂರು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಸಂಬಂಧಿಸಿದಂತೆ ವಹಿವಾಟು ಸಲಹೆಗಾರರನ್ನು ಆಯ್ಕೆ ಮಾಡಿಕೊಳ್ಳಲು Infrastructure Development Ports and inland Water Transport Department Government of karnataka (IDP & IWTD) ಎಂಪ್ಯಾನಲ್ ಆಗಿರುವ ಸಂಸ್ಥೆಗಳಿಗೆ ಮಾತ್ರ ಟೆಂಡರ್ ಪ್ರಕಟಿಸಿದ್ದು, ಸದರಿ ಟೆಂಡರ್ Pre-Bid ಸಭೆಯಲ್ಲಿ ಏಂಪ್ಯಾನಲ್ಡ್ ಬಿಡ್ಡುದಾರರಿಗೆ ಪ್ರಕಟಿಸಿರುವ ಟೆಂಡ‌ರ್ ಬದಲಿಗೆ ಒಪನ್ ಟೆಂಡರ್ ಅನ್ನು ಪ್ರಕಟಿಸಿರುವಂತೆ ಬಿಡುದಾರ ಸಂಸ್ಥೆಗಳು ಕೋರಿರುತ್ತಾರೆ. ಆದ್ದರಿಂದ ಸದರಿ ಟೆಂಡರ್ ಅನ್ನು ರದ್ದುಪಡಿಸಿದ್ದು, ಮತ್ತೊಮ್ಮೆ ಅತ್ಯಂತ ಜರೂರಾಗಿ ಟೆಂಡರ್ (Open Tender) ಅನ್ನು ಮರುಪ್ರಕಟಿಸಲಾಗಿದ್ದು, ಸದರಿ ಟೆಂಡರ್ ತಾಂತ್ರಿಕ ಬಿಡ್ಡನ್ನು 12.09.2025 ರಂದು ತೆರೆಯಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಸಚಿವರು ತಿಳಿಸಿದ್ದಾರೆ.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page