ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ – ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು
ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 15ರಂದು ರಾತ್ರಿ ಪೆಟ್ರೋಲಿಂಗ್ ವೇಳೆ ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ವಿಟ್ಲ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಸಂಶಯಾಸ್ಪದವಾಗಿ ನಿಂತಿದ್ದ ಮೂವರನ್ನು ವಿಚಾರಿಸಿದಾಗ, ಅವರು ಗಾಂಜಾ ಮಾರಾಟ ಮಾಡಲು ಬಂದಿರುವುದು ಬಹಿರಂಗವಾಯಿತು.

ಬಂಧಿತರಾದವರು — 23 ವರ್ಷ ಪ್ರಾಯದ ಸನತ್ ಕುಮಾರ್, 23 ವರ್ಷ ಪ್ರಾಯದ ಮಹಮ್ಮದ್ ರಾಝಿಕ್ ಹಾಗೂ 23 ವರ್ಷ ಪ್ರಾಯದ ಚೇತನ್, ಮಂಗಳಪದವು, ವಿಟ್ಲ ಕಸಬಾ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 6.27 ಗ್ರಾಂ ಗಾಂಜಾ, ಮೂರು ಮೊಬೈಲ್ ಫೋನ್‌ಗಳು, ಒಂದು ಸಣ್ಣ ಚೂರಿ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ವಿಟ್ಲ ಠಾಣೆಯಲ್ಲಿ ಅಕ್ರ.126/2025, ಕಲಂ 8(b), 20(b)(ii)(A) NDPS Act ಮತ್ತು 3(5) BNS 2023ರಂತೆ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿಸಿರುವ ಪೊಲೀಸರು ಮತ್ತೊಬ್ಬ ಆರೋಪಿಯಾದ 23 ವರ್ಷ ಪ್ರಾಯದ ಧ್ಯಾನ್ ಕರ್ಕೆರ, ಎರ್ಮೆ ಮಜಲು ನಿವಾಸಿಯನ್ನು ಸಹ ವಶಕ್ಕೆ ಪಡೆದಿದ್ದಾರೆ.




