August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುಳ್ಯ-ಪುತ್ತೂರು KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ – ಆರೋಪಿಗೆ ಶಿಕ್ಷೆ

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ನಾಲ್ಕು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. 2022ರ ಏಪ್ರಿಲ್‌ 25ರಂದು ಸುಳ್ಯದಿಂದ ಪುತ್ತೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಯುವತಿ ಕುಳಿತಿದ್ದ ಸೀಟಿನ ಪಕ್ಕ ಕುಳಿತಿದ್ದ ಮಾಡ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸತ್ತಾರ್ ಕಿರುಕುಳ ನೀಡಿದ ಪ್ರಕರಣ ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿತ್ತು.

ಈ ಪ್ರಕರಣವನ್ನು ತನಿಖೆ ನಡೆಸಿದ ಪುತ್ತೂರು ನಗರ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ರವರು ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಾನ್ಯ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ್ ಅವರು ಆರೋಪಿಗೆ ನಾಲ್ಕು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಇನ್ನೂ ಒಂದು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಕವಿತಾ ಕೆ. ವಾದ ಮಂಡಿಸಿದ್ದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page