August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೆಬಳೆ ಗ್ರಾಮದ ಅರಿಕಲ್ ಜಟಕೇಶ್ವರ ದೇವಸ್ಥಾನದ ಹುಂಡಿ ಒಡೆದು ಕಳ್ಳತನ – ಇಬ್ಬರು ಆರೋಪಿಗಳ ಬಂಧನ

ಆರೋಪಿಗಳಿಂದ ಬೈಕ್ ಸೇರಿದಂತೆ ರೂಪಾಯಿ 2.21 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡ ಭಟ್ಕಳ ಗ್ರಾಮೀಣ ಪೊಲೀಸರು

ಭಟ್ಕಳ ತಾಲೂಕಿನ ಹೆಬಳೆ ಗ್ರಾಮದ ಶ್ರೀ ಅರಿಕಲ್ ಜಟಕೇಶ್ವರ ದೇವಸ್ಥಾನದ ಹುಂಡಿಯನ್ನು ಮಧ್ಯರಾತ್ರಿ ಒಡೆದು ಹಣ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 14ರಂದು ಸಂಭವಿಸಿದ ಈ ಘಟನೆ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ (Cr.No.125/2025) ದಾಖಲಿಸಲಾಗಿತ್ತು. 331(4), 305(2) BNS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತರಾದವರು ಶಿರಾಲಿ ನಿವಾಸಿ ಅಮೀರ್ (ತಂದೆ ಹಸನ ಬ್ಯಾರಿ) ಹಾಗೂ ಭಟ್ಕಳ ನಿವಾಸಿ ಮಹ್ಮದ್ ಇಮ್ರಾನ್ (ತಂದೆ ಅಬ್ದುಲ್ ಗಫಾರ). ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾದ ಎರಡು ಬೈಕ್‌ಗಳ ಜೊತೆಗೆ ಒಟ್ಟು ರೂಪಾಯಿ 2,21,295 ಮೌಲ್ಯದ ಸ್ವತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page