September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಿಷ್ಠಾವಂತ, ಪ್ರಾಮಾಣಿಕ, ದಕ್ಷ  ಪೊಲೀಸ್‌ ಅಧಿಕಾರಿಯಾಗಿದ್ದ ನಿವೃತ್ತ ಡಿಸಿಪಿ ಧರ್ಮಯ್ಯ ನಿಧನ

MLC ಐವನ್ ಡಿಸೋಜರವರಿಂದ ಅಂತಿಮ ನಮನ

ಮಂಗಳೂರಿನ ಡಿಸಿಪಿ (ಅಪರಾಧ-ಸಂಚಾರ) ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ 71 ವರ್ಷ ಪ್ರಾಯದ ಡಿ. ಧರ್ಮಯ್ಯರವರು ಮಂಗಳೂರು ಬೆಂದೂರುವೆಲ್‌ನ ತಮ್ಮ ನಿವಾಸದಲ್ಲಿ ಸೆಪ್ಟೆಂಬರ್ 24ರಂದು ಬುಧವಾರ ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಹೊಸೂರಿನವರಾದ ಧರ್ಮಯ್ಯರವರು ತಮ್ಮ ಸೇವಾ ಜೀವನವನ್ನು ಮೈಸೂರು ನಗರದಲ್ಲಿ ಉಪನಿರೀಕ್ಷಕರಾಗಿ (SI) ಆರಂಭಿಸಿದ್ದರು. ನಂತರ ಯಳಂದೂರು, ಚಾಮರಾಜನಗರ, ವಿರಾಜಪೇಟೆ ಠಾಣೆಗಳಲ್ಲಿ ಸೇವೆ ಸಲ್ಲಿಸಿದ ಇವರು ಸರ್ಕಲ್ ಇನ್‌ಸ್ಪೆಕ್ಟರ್ ಆಗಿ ಬೆಳ್ತಂಗಡಿ, ಕಾರ್ಕಳ ಹಾಗೂ ಉಡುಪಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ನಂತರ ಡಿವೈಎಸ್‌ಪಿ ಹುದ್ದೆಯಲ್ಲಿ ಸೇವೆ ಸಲ್ಲಿಸಿ, ಬಳಿಕ ಬೆಂಗಳೂರಿನಲ್ಲಿ ಎಸಿಪಿಯಾಗಿ ಕಾರ್ಯ ನಿರ್ವಹಿಸಿದ್ದರು.

ಮಂಗಳೂರಿನಲ್ಲಿ ಡಿಸಿಪಿ (ಅಪರಾಧ ಮತ್ತು ಸಂಚಾರ ವಿಭಾಗ) ಹುದ್ದೆಯನ್ನು ಭರಿಸಿ, 2013ರಲ್ಲಿ ಸೇವಾ ನಿವೃತ್ತಿ ಹೊಂದಿದ ಇವರು ಬಳಿಕ ಮಂಗಳೂರಿನಲ್ಲೇ ಕುಟುಂಬದ ಸದಸ್ಯರೊಂದಿಗೆ ನೆಲೆಸಿದ್ದರು. ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು ಹಾಗೂ ನಾಲ್ವರು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಧರ್ಮಯ್ಯರವರು ಶಿಸ್ತಿನ ಜೀವನವನ್ನು ನಡೆಸಿ ನಿಷ್ಠಾವಂತ, ಪ್ರಾಮಾಣಿಕ, ದಕ್ಷ ಹಾಗೂ ಆದರ್ಶ ಪೊಲೀಸ್ ಅಧಿಕಾರಿಯಾಗಿದ್ದರು. ಜನರ ಸಮಸ್ಯೆಗಳನ್ನು ಗಮನವಿಟ್ಟು ಕೇಳಿ ಪರಿಹರಿಸಲು ಸದಾ ಮುಂದಾಗಿದ್ದರು. ಅಧಿಕಾರದಲ್ಲಿದ್ದಾಗ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಸೇವೆ ಸಲ್ಲಿಸಿದವರು. ಸದಾ ಸಹೋದ್ಯೋಗಿಗಳಿಗೆ ಪ್ರೋತ್ಸಾಹ ನೀಡುತ್ತಾ ಕುಟುಂಬದಂತೆ ಕೆಲಸ ಮಾಡಿದವರು. ಸಮಾಜದಲ್ಲಿ ಉತ್ತಮ ಪೊಲೀಸ್‌ ಅಧಿಕಾರಿಯಾಗಿ ಹೆಸರು ಮಾಡಿದ್ದವರು. ಇದರಿಂದಾಗಿ 2011ರ ಸ್ವಾತಂತ್ರ್ಯ ದಿನಾಚರಣೆಯಂದು, ಅವರು ಸಲ್ಲಿಸಿದ ಸರ್ವೋಚ್ಚ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ಕರ್ನಾಟಕ ರಾಜ್ಯಪಾಲರು 2012 ಅಕ್ಟೋಬರ್ 5ರಂದು ಬೆಂಗಳೂರಿನ ರಾಜಭವನದಲ್ಲಿ ನೀಡಿ  ಸನ್ಮಾನಿಸಿದ್ದರು. ಅವರ ನಿಧನದಿಂದ ಪೊಲೀಸರು ಮತ್ತು ಸಾರ್ವಜನಿಕರು ದುಃಖದಲ್ಲಿದ್ದಾರೆ. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜರವರು ಡಿ. ಧರ್ಮಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಅಂತಿಮ ನಮನ ಸಲ್ಲಿಸಿದರು.

ಸೇವಾ ಅವಧಿಯಲ್ಲಿ ಶಿಸ್ತು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಪರಾಧ ನಿಯಂತ್ರಣದಲ್ಲಿ ತೀಕ್ಷ್ಣ ಬುದ್ಧಿಮತ್ತೆ ಹಾಗೂ ಕಾರ್ಯನಿರ್ವಹಣಾ ಶೈಲಿಯಿಂದ ಮೆಚ್ಚುಗೆ ಪಡೆದವರು. ಸಂಚಾರ ನಿಯಂತ್ರಣದಲ್ಲಿ ನವೀನ ಕ್ರಮಗಳನ್ನು ಜಾರಿಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಗ್ರಾಮಾಂತರ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವಾಗ ಜನಸಾಮಾನ್ಯರ ವಿಶ್ವಾಸವನ್ನು ಗಳಿಸಿದ್ದರು.

ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿ ತಂಡ ಕಾರ್ಯಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಅಧಿಕಾರದಲ್ಲಿದ್ದಾಗ ಜನಪರ ಪೊಲೀಸ್‌ ಅಧಿಕಾರಿಯಾಗಿ ಖ್ಯಾತಿ ಗಳಿಸಿ ಸಮಾಜದಲ್ಲಿ ದೀರ್ಘಕಾಲ ನೆನಪಿನಲ್ಲಿರುವ ವ್ಯಕ್ತಿಯಾಗಿದ್ದಾರೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page