ಹಿರಿಯ ಕಾಂಗ್ರೆಸ್ ಮುಖಂಡ ಬೆಳ್ತಂಗಡಿಯ ಕೆ. ಹರೀಶ್ ಕುಮಾರ್ ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಆಯ್ಕೆ
ರಾಜ್ಯ ಸರಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬೆಳ್ತಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರವರು ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (ಮೆಸ್ಕಾಂ) ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.



ಕಾಂಗ್ರೆಸ್ ಹೈಕಮಾಂಡ್ 39 ನಿಗಮ ಮಂಡಳಿಗಳ ಅಧ್ಯಕ್ಷ ಉಪಾದ್ಯಕ್ಷರುಗಳ ಈ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಅದೇ ರೀತಿ ಮಂಗಳೂರಿನ ಶಾಲೆಟ್ ಪಿಂಟೋ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಹಾಗೂ ಲಾವಣ್ಯಾ ಬಲ್ಲಾಳ್ ಕರ್ನಾಟಕ ಸ್ಟೇಟ್ ಸೀಡ್ ಆಂಡ್ ಆರ್ಗಾನಿಕ್ ಸರ್ಟಿಫಿಕೇಷನ್ ಏಜನ್ಸಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.




