November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

‘ಕಾಸ್ಕ್’  ಸಂಸ್ಥೆಯ ಮಹಾಸಭೆ ಮತ್ತು ಪುನರ್ಮಿಲನ

ಸಪ್ಟೆಂಬರ್ 21ರಂದು ಭಾನುವಾರ ಬೆಂದೂರ್ ಚರ್ಚ್ ಸಭಾಂಗಣದಲ್ಲಿ ಕಾಸ್ಕ್ ಸಂಸ್ಥೆಯ ವಾರ್ಷಿಕ ಮಹಾಸಭೆಯು ನಡೆಯಿತು. ಮಹಾಸಭೆಯ ನಂತರ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರ ಪುನರ್ಮಿಲನ ಸಮಾರಂಭವು ನೆರವೇರಿತು.

ಫ್ಲೋರಾ ಕ್ಯಾಸ್ತೆಲಿನೊ ಸಂಚಾಲನೆಯಲ್ಲಿ ಕೊಂಕಣಿ ಸಂಸ್ಕೃತಿ ಮತ್ತು ಪರಂಪರೆಯ ಅನೇಕ ಕಾರ್ಯಕ್ರಮಗಳು ನೆರವೇರಿದವು. ರೆಮೋನಾ ಇವೆಟ್ ಪಿರೇರಾ ಭರತನಾಟ್ಯವನ್ನು ಪ್ರದರ್ಶಿಸಿದರು. ಇತ್ತೀಚೆಗೆ ನಡೆದ 120 ಗಂಟೆಗಳ ಪ್ರದರ್ಶನ ಮತ್ತು ವಿಶ್ವ ದಾಖಲೆಗಾಗಿ ಅವರನ್ನು ಅಭಿನಂದಿಸಲಾಯಿತು. ಅವರ ಅಸಾಧಾರಣ ಸಾಧನೆಗಾಗಿ ಪ್ರತಿಷ್ಠಿತ ‘ಕಾಸ್ಕ್ ಮೊತಿಯಾಂ’ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಸಾನ್ಸಿಯಾರವರ ಕೊಂಕಣಿ ಪರಂಪರೆಯ ನುಡಿನಮನ, ಪ್ರಜ್ವಲ್ ಮತ್ತು ಶವಿಲ್ ಇವರ ‘ಗುಮಟ್’ ವಾದನ, ಮೆಲ್ವಿಟಾ ಹಾಗೂ ತಂಡದಿಂದ ದೆಖ್ಣಿ ನಾಚ್, ರೋಮಿತ್ ಹಾಗೂ ತಂಡದಿಂದ ತೊಣಿಯೊ ನಾಚ್ ನಂತಹ ಜಾನಪದ ನೃತ್ಯಗಳು ಪ್ರದರ್ಶಿಸಲ್ಪಟ್ಟವು. ಫ್ರ್ಯಾಂಕ್ಲಿನ್ ರವರ ‘ಮಾಂಡೊ’ ಗಾಯನವು ಉತ್ಸವಕ್ಕೆ ಶಾಸ್ತ್ರೀಯ ಗೋವಾ ಸೊಬಗನ್ನು ನೀಡಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ಪ್ರತಿಮಾರವರನ್ನು ಗೌರವಿಸಲಾಯಿತು. ಜಾನೆಟ್ ಡಿಸೋಜ ನಡೆಸಿ ಕೊಟ್ಟ ಹೌಸಿ ಹೌಸಿ ಆಟದೊಂದಿಗೆ ಉಪಾಧ್ಯಕ್ಷರಾದ ಡಾ। ರೋಹನ್ ಮೊನಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page