June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಾನುವಾರು ಹತ್ಯೆ ಪ್ರಕರಣದ ಆರೋಪಿಯ ಮನೆ ಮತ್ತು ಅಕ್ರಮ ಕಸಾಯಿ ಖಾನೆಯನ್ನು ಜಪ್ತಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಅಕ್ರಮ ಜಾನುವಾರು ಹತ್ಯೆ ಮಾಡುವವರಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಇಲಾಖೆ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ ಹಸನಬ್ಬ ಎಂಬಾತ ಗೋ ಕಳವು, ಗೋ ವಧೆಯಂತಹ ಪಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು ಈತನ ಮೇಲೆ ಠಾಣಾ ಅಕ್ರ 123/2025 ಕಲಂ 303 ಬಿಎನ್ ಎಸ್ ಕಲಂ 4,7,12 ಗೋಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆಎಮ್ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈತನ ವಿರುದ್ಧ 2017 ನೇ ಸಾಲಿನಲ್ಲಿ ಅಕ್ರ 65/2017 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆ, 2008 ನೇ ಸಾಲಿನಲ್ಲಿ ಅಕ್ರ 88/2018 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆಯಂತೆ ಪ್ರಕರಣಗಳು ದಾಖಲಾಗಿದೆ. ಈತ ಗೋ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಕಳವು ಮಾಡಿದಂತಹ ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಮನೆಯಲ್ಲಿಯೇ ಕಸಾಯಿ ಖಾನೆ ನಿರ್ಮಾಣ ಮಾಡಿಕೊಂಡು ವಧೆ ಮಾಡಿ ಮಾಂಸ ಮಾಡುತ್ತಿದ್ದು ಈತನನ್ನು ನಿಯಂತ್ರಿಸಲು ಈತನು ಮನೆಯಲ್ಲಿಯೇ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಮಂಗಳೂರು ಉಪವಿಭಾಗರವರಿಗೆ ವರದಿಯನ್ನು ಸಲ್ಲಿಸಲಾಗಿತ್ತು.

ಅದರಂತೆ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಂ 8(4) 8(5) ರಡಿಯಲ್ಲಿ ಸೆಪ್ಟೆಂಬರ್ 25ರಂದು ಪ್ರಕರಣ ಸಂಖ್ಯೆ ಎಂ.ಎ.ಜಿ/ಎಸ್ಆರ್ 44/2025 ರಂತೆ ಠಾಣಾ ಅಕ್ರ 123/2025 ನೇ ದರಂತೆ ಹಸನಬ್ಬ ಈತನ ವಶದಲ್ಲಿರುವ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಿಪಳ್ಳ ಪಾಡಿ ಎಂಬಲ್ಲಿರುವ ಮನೆನಂಬ 6-54 ಹಾಗೂ 6-54(1) ದ ಮನೆಯನ್ನು / ಅಕ್ರಮ ಕಸಾಯಿ ಕಾನೆಯನ್ನು ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಪುಕರಣದಲ್ಲಿ ಮನೆ/ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಮಾಡಿರುವುದು ಇದು ಮೊದಲ ಪ್ರಕರಣವಾಗಿದೆ.

You may also like

News

ಕಂಬಳ ಕೋಣಗಳ ಮಾಲೀಕನಿಗೆ ಹಲ್ಲೆ, ಸುಲಿಗೆ ಯತ್ನ ಪ್ರಕರಣ – ಮೂವರು KCOCA ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕಂಬಳದಲ್ಲಿ ಗೆದ್ದ ಕೋಣಗಳ ಮಾಲೀಕನಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ
News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ

You cannot copy content of this page