ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ
ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುತ್ರ 48 ವರ್ಷ ಪ್ರಾಯದ ಸುದೀಪ್ ಭಂಡಾರಿಯವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಅಕ್ಟೋಬರ್ 13ರಂದು ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ರೈಲು ಹಳಿಯ ಬಳಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದೀಪ್ ಭಂಡಾರಿಯವರು ಹೆಬ್ರಿಯಲ್ಲಿ ವೈನ್ಸ್ ಶಾಪ್ ನಡೆಸಿಕೊಂಡಿದ್ದರು. ಅತ್ಯಂತ ಸರಳ ಹಾಗೂ ಎಲ್ಲರಿಗೂ ಹತ್ತಿರವಾಗಿದ್ದ ಸುದೀಪ್ ರವರ ಆಕಸ್ಮಿಕ ಸಾವಿನ ಸುದ್ದಿ ಕೇಳಿ ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶದ ಜನರು ಆಘಾತಗೊಂಡಿದ್ದಾರೆ.
ಸುದೀಪ್ ಭಂಡಾರಿಯವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.


ಎರಡು ಬಾರಿ ಶಾಸಕರಾಗಿದ್ರು ಗೋಪಾಲ್ ಭಂಡಾರಿ
ಸುದೀಪ್ ತಂದೆ ಹೆಚ್. ಗೋಪಾಲ್ ಭಂಡಾರಿಯವರು 1999ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ನಂತರ ಎರಡನೇ ಬಾರಿ 2008ರಲ್ಲಿಯೂ ಶಾಸಕರಾಗಿದ್ದರು. ಹೆಚ್. ಗೋಪಾಲ್ ಭಂಡಾರಿಯವರು ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಗೋಪಾಲ್ ಭಂಡಾರಿ ಅವರಿಗಿಂತ ಮುಂಚೆ ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ಪ್ರತಿನಿಧಿಸುತ್ತಿದ್ದರು. ಸದ್ಯ ಬಿಜೆಪಿಯ ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.





