July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಾಟ – ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವನ ಬಂಧನ

ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು CISF ಜವಾನರು ಸೋಮವಾರ ವಶಕ್ಕೆ ಪಡೆದು‌ ಬಜ್ಪೆ‌ ಪೊಲೀಸರಿಗೆ ಒಪ್ಪಿಸಿದ್ದಾರೆ‌.‌ ಬಂಧಿತನಾದ ವ್ಯಕ್ತಿ ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಅಕ್ಟೋಬರ್ 13ರಂದು ಸೋಮವಾರ ಸಂಜೆ 6:30ಕ್ಕೆ ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ‌ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಬಂದ ಹಿನ್ನೆಲೆ ವಿಮಾನ‌ ನಿಲ್ದಾಣ ಸಿಬ್ಬಂದಿ ಆಧರಿಸಿ ವಿಮಾನ‌ ನಿಲ್ದಾಣದ ಭದ್ರತಾ ಸಿಬ್ಬಂದಿ‌ CISF ಸಿಬ್ಬಂದಿಗೆ ಮಾಹಿತಿ ನೀಡಿದ್ದರು.‌

ಅದರಂತೆ ಸಂಜೆ ಇಂಡಿಗೋ ವಿಮಾನದಲ್ಲಿ ಬಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ‌ ಇಳಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಪರಿಶೀಲನೆ‌‌ ನಡೆಸಿದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page