July 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೈಂದೂರು ಮೂವರು ವಿದ್ಯಾರ್ಥಿಗಳು ಸಮುದ್ರ ಪಾಲು

ಸಮುದ್ರದಲ್ಲಿ ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹೊಸಹಿತ್ಲು ಎಂಬಲ್ಲಿ ಅಕ್ಟೋಬರ್ 14ರಂದು ಮಂಗಳವಾರ ಸಂಜೆ ನಡೆದಿದೆ.

ಹೊಸಹಿತ್ಲು ಮಕ್ಕಿತಾರು ನಿವಾಸಿಗಳಾದ ಉದಯ ದೇವಾಡಿಗ ಎಂಬುವವರ ಪುತ್ರ 15 ವರ್ಷ ಪ್ರಾಯದ ಆಶಿಶ್ ದೇವಾಡಿಗ, ಮಾರುತಿ ಪೂಜಾರಿ ಅವರ ಪುತ್ರ 16 ವರ್ಷ ಪ್ರಾಯದ ಸೂರಜ್ ಪೂಜಾರಿ, ಸುಧಾಕರ ದೇವಾಡಿಗ ಅವರ ಪುತ್ರ 18 ವರ್ಷ ಪ್ರಾಯದ ಸಂಕೇತ್ ದೇವಾಡಿಗ ಮೃತ ದುರ್ದೈವಿಗಳು. ಇನ್ನೋರ್ವ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ವಿವರ: ನಾಲ್ವರು ವಿದ್ಯಾರ್ಥಿಗಳು ಸಂಜೆಯ ವೇಳೆಗೆ ಈಜಲು ತೆರಳಿದ್ದು ಈ ವೇಳೆ ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿದ್ದಾರೆ. ಮೂವರು ನೀರಿನಲ್ಲಿ ಕೊಚ್ಚಿಹೋಗಿದ್ದು ಸ್ಥಳೀಯರು ಹಾಗೂ ಮೀನುಗಾರರ ಸಹಕಾರದಿಂದ ಮೃತದೇಹಗಳನ್ನು ಪತ್ತೆಮಾಡಲಾಗಿತ್ತು. ಮೃತಪಟ್ಟ ವಿದ್ಯಾರ್ಥಿಗಳಾದ ಆಶಿಶ್ ದೇವಾಡಿಗ ಕಿರಿಮಂಜೇಶ್ವರ ಹೈಸ್ಕೂಲಿನಲ್ಲಿ 9ನೇ ತರಗತಿ, ಸೂರಜ್ ಪೂಜಾರಿ 10 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಸಂಕೇತ್ ದೇವಾಡಿಗ ಬೈಂದೂರು ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯಾಗಿದ್ದರು. ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿದ್ದಾರೆ.

You may also like

News

ಪುತ್ತೂರಿನಲ್ಲಿ ಯುವತಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಆರೋಪ – ಸತ್ಯಾಂಶ ಬಿಚ್ಚಿಟ್ಟ ಪೊಲೀಸರು

ಉಭಯ ಕಡೆಯಿಂದ ದೂರು ದಾಖಲು! ಸುಳ್ಳು ಸುದ್ದಿ ಅಥವಾ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ – ಜಿಲ್ಲಾ SP ಡಾ. ಅರುಣ್ ಕೆ. ಯುವತಿಯೊಬ್ಬಳು
News

ವೇಗದ ಅಬ್ಬರಕ್ಕೆ ವಿದ್ಯಾರ್ಥಿ ಬಲಿ – ವಾಹನ ಸಮೇತ ಚಾಲಕ ಪರಾರಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐಟಿಐ ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮತ್ತೋರ್ವ ವಿದ್ಯಾರ್ಥಿ

You cannot copy content of this page