July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

RSS ಚಟುವಟಿಕೆಗಳಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿದೆ – ಮಾಜಿ ಸಚಿವ ಬಿ. ರಮಾನಾಥ ರೈ

ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಜಾತ್ಯತೀತತೆ ಅದಕ್ಕೇ ಜನ ಬೆಂಬಲ

ರಾಜ್ಯದ ಸಚಿವರಾದ ಪ್ರಿಯಾಂಕ ಖರ್ಗೆ RSS ಚಟುವಟಿಕೆಗಳ ಕುರಿತು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಬಿ. ರಮಾನಾಥ ರೈಯವರು ಹೇಳಿದ್ದಾರೆ. ಅವರು ಇಂದು ಅಕ್ಟೋಬರ್ 16ರಂದು ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ದೇಶದ ಜಾತ್ಯತೀತ ಮೌಲ್ಯಗಳನ್ನು ಕಾಪಾಡಲು ಹಾಗೂ ಸಾಮಾಜಿಕ ಸಾಮರಸ್ಯವನ್ನು ಬಲಪಡಿಸಲು ಸಾರ್ವಜನಿಕ ಸ್ಥಳಗಳು ಮತ್ತು ಸರಕಾರಿ ಶಾಲೆಗಳಲ್ಲಿ RSS ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಶಾಖೆಗಳ ಮೂಲಕ ಸಣ್ಣ ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಪ್ರಯತ್ನ ನಡೆಯುತ್ತಿದೆ. ಇದು ಮುಂದಿನ ದಿನಗಳಲ್ಲಿ ಸಮಾಜದ ಶಾಂತಿ ಹಾಗೂ ಸಹಬಾಳ್ವೆಗೆ ಅಪಾಯಕಾರಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮತೀಯ ಸಾಮರಸ್ಯಕ್ಕೆ ಹಾನಿ ಆಗದಂತೆ ಎಲ್ಲರೂ ಜಾಗೃತರಾಗಬೇಕು. RSS ಸಂಘಟನೆಯಿಂದ ಮತಭೇದ ಹುಟ್ಟಿಸುವ ಕಾರ್ಯಕ್ರಮಗಳು ನಡೆಯುತ್ತಿರುವುದಾಗಿ ಆರೋಪಿಸಿ, “ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಜಾತ್ಯತೀತವಾದದ್ದು. ಅದಕ್ಕೇ ಜನರು ನಮಗೆ ಬೆಂಬಲಿಸುತ್ತಿದ್ದಾರೆ. RSS ಚಟುವಟಿಕೆಗಳು ಇದರ ವಿರುದ್ಧವಾಗಿವೆ, ಅದನ್ನು ನಾವು ಖಂಡಿಸುತ್ತೇವೆ. ರಾಹುಲ್ ಗಾಂಧಿಯವರ ಮಾತು ಉಲ್ಲೇಖಿಸಿ, “RSSಗೆ ಹೆದರುವವರು ನಮ್ಮ ಪಕ್ಷದಲ್ಲಿರಬಾರದು ಎಂಬ ಅವರ ನಿಲುವು ಸೈದ್ಧಾಂತಿಕವಾಗಿ ಸರಿಯಾಗಿದೆ. ಕಾರ್ಯಕರ್ತರು ಧರ್ಮನಿರಪೇಕ್ಷ ಸಮಾಜ ನಿರ್ಮಾಣದತ್ತ ಶ್ರಮಿಸಬೇಕು. ಸರ್ದಾರ್ ವಲ್ಲಭಭಾಯಿ ಪಟೇಲ್‌ರವರನ್ನು ಕೇವಲ ಪ್ರಚಾರಕ್ಕಾಗಿ ಬಳಸದೆ, ಅವರ ತೀರ್ಮಾನಗಳ ಆತ್ಮವನ್ನು ಗೌರವಿಸಬೇಕೆಂದು ಒತ್ತಾಯಿಸಿದರು. ಗಾಂಧೀಜಿ ಹತ್ಯೆಯಲ್ಲಿ ಭಾಗಿಯಾದವರ ಕುರಿತು ಎಚ್ಚರದಿಂದ ಇರಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಎಂ.ಜಿ. ಹೆಗ್ಡೆ, ಬೇಬಿ ಕುಂದರ್, ಬಿ.ಎಲ್. ಪದ್ಮನಾಭ ಕೋಟ್ಯಾನ್, ಎಸ್. ಅಪ್ಪಿ, ಚಿತ್ತರಂಜನ್ ಶೆಟ್ಟಿ ಬೊಂಡಲ, ದಿನೇಶ್ ಮುಳೂರು, ಸದಾಶಿವ ಶೆಟ್ಟಿ, ಟಿ.ಕೆ. ಸುಧೀರ್, ಗಿರೀಶ್ ಶೆಟ್ಟಿ, ಪದ್ಮಪ್ರಸಾದ್ ಜೈನ್, ಮಂಜುಳಾ ನಾಯಕ್, ರಮಾನಂದ ಪೂಜಾರಿ, ಸಜೀತ್ ಶೆಟ್ಟಿ ವಾಮಂಜೂರು, ಯೋಗೀಶ್ ಕುಮಾರ್, ಸುನೀಲ್ ಬಜಿಲಕೇರಿ ಮತ್ತಿತರರು ಉಪಸ್ಥಿತರಿದ್ದರು.

You may also like

News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು
News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at

You cannot copy content of this page