July 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಿಲಿಕುಳ ನಿಸರ್ಗಧಾಮದಲ್ಲಿ ಲೋಕಾಯುಕ್ತರ ಅನಿರೀಕ್ಷಿತ ದಾಳಿ

ನಿರ್ವಹಣಾ ಲೋಪದೋಷಗಳ ಪತ್ತೆತನಿಖೆ ಮುಂದುವರಿಕೆ

ಮಾನಸ ವಾಟರ್ ಪಾರ್ಕ್, ಮೃಗಾಲಯ ಸೇರಿದಂತೆ ಇತರ ಕಡೆಗಳಲ್ಲಿ  ಅವ್ಯವಹಾರ ಕಂಡು ಬಂದಲ್ಲಿ ಕೂಡಲೆ ಲೋಕಾಯುಕ್ತಕ್ಕೆ ದೂರು ನೀಡಲು ಸೂಚನೆ

ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಅಕ್ಟೋಬರ್ 16ರಂದು ಗುರುವಾರ ಪಿಲಿಕುಳ ನಿಸರ್ಗಧಾಮದ ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಚಾನಕ್‌ ಸರ್ಚ್ ಕಾರ್ಯಾಚರಣೆ ನಡೆಸಿದ್ದಾರೆ. ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ. ಕುಮಾರ್ ಅವರ ನೇತೃತ್ವದಲ್ಲಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ರವಿ ಪೀರು ಪವಾರ್, ಸುರೇಶ್ ಕುಮಾರ್ ಪಿ. ಹಾಗೂ ಉಡುಪಿ ಲೋಕಾಯುಕ್ತದ ರಾಜೇಂದ್ರ ನಾಯ್ಕ್ ಎಂ.ಎನ್. ಸೇರಿದಂತೆ ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತು.

ಪರಿಶೀಲನೆಯ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಕೆಲವು ಲೋಪದೋಷಗಳು ಪತ್ತೆಯಾಗಿದ್ದು, ಸಂಬಂಧಿತ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಮೃಗಾಲಯ, ಗುತ್ತು ಮನೆ, ಮಾನಸ ವಾಟರ್ ಪಾರ್ಕ್, ಲೇಕ್ ಗಾರ್ಡನ್ ಹಾಗೂ ಸೈನ್ಸ್ ಮ್ಯೂಸಿಯಂ ಸೇರಿದಂತೆ ಅನೇಕ ಘಟಕಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಯಾವುದೇ ಅಕ್ರಮ ಅಥವಾ ಅವ್ಯವಹಾರಗಳ ಬಗ್ಗೆ ಮಾಹಿತಿ ನೀಡಲು ಲೋಕಾಯುಕ್ತ ಕಚೇರಿಯ ☎️ 0824-2950997 ಗೆ ಕರೆ ಮಾಡಬಹುದು ಅಥವಾ ನೇರವಾಗಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದು ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರಾದ  (ಪ್ರಭಾರ) ಕುಮಾರಚಂದ್ರರವರು ತಿಳಿಸಿದ್ದಾರೆ.

You may also like

News

Father Muller Homoeopathic Medical College Hosts Dr M.L. Dhawale Memorial Seminar 2026

The Department of Practice of Medicine, Father Muller Homoeopathic Medical College & Hospital, Deralakatte, Mangalore, organised the Dr M.L. Dhawale
News

ರೊಜಾರಿಯೊ ಕ್ಯಾಥೆಡ್ರಲ್‌ನಲ್ಲಿ ಹೃದಯ ಆರೋಗ್ಯ ಜಾಗೃತಿ ಹಾಗೂ ಸಿಪಿಆರ್ ತರಬೇತಿ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ರೊಜಾರಿಯೊ ಕ್ಯಾಥೆಡ್ರಲ್‌ನ ಆರೋಗ್ಯ ಆಯೋಗವು ಚರ್ಚ್ ಪಾಲನಾ ಸಮಿತಿಯ 21 ಆಯೋಗಗಳ ಸಹಯೋಗದಲ್ಲಿ “A Healthy Heart for a Blessed Life”

You cannot copy content of this page