August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರಿನಲ್ಲಿ ಟ್ರಾಫಿಕ್ ಪೊಲೀಸರ ಅಮಾನತು

ಪುತ್ತೂರಿನಲ್ಲಿ ನಡೆದ ಘಟನೆಯೊಂದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ, ಇಬ್ಬರು ಸಂಚಾರ ಪೊಲೀಸರು ಕರ್ತವ್ಯದಿಂದ ಅಮಾನತುಗೊಂಡಿದ್ದಾರೆ.

ಮಾಹಿತಿಯ ಪ್ರಕಾರ ನಿನ್ನೆ ಅಕ್ಟೋಬರ್ 17ರಂದು ಶುಕ್ರವಾರ ಸಂಜೆ ವೇಳೆಯಲ್ಲಿ, ಕುರಿಯ ಗ್ರಾಮದ ಆಟೋ ಚಾಲಕ ಬಶೀರ್ ಸಮವಸ್ತ್ರ ಧರಿಸಿಕೊಂಡೇ ಆಟೋ ಚಲಾಯಿಸುತ್ತಿದ್ದರು. ಆ ವೇಳೆ ಪುತ್ತೂರು ಸಂಚಾರ ಠಾಣೆಯ ಎ.ಎಸ್‌.ಐ. ಚಿದಾನಂದ ರೈ ಮತ್ತು ಸಿಪಿಸಿ 2283 ಶೈಲ ಎಂ.ಕೆ. ಅವರು ಕೈಸನ್ನೆ ಮೂಲಕ ವಾಹನ ನಿಲ್ಲಿಸಲು ಸೂಚಿಸಿದರೂ, ಚಾಲಕ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಹೋದರೆಂದು ತಿಳಿದುಬಂದಿದೆ.

ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಹಿಂಬಾಲಿಸಿ ವಾಹನ ತಡೆದ ವೇಳೆ, ಚಾಲಕನೊಂದಿಗೆ ಅವಾಚ್ಯ ಶಬ್ದ ಬಳಸಿ, ಕೈಯಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಹಿನ್ನೆಲೆಯಲ್ಲಿ, ವಿಚಾರಣೆ ನಡೆಸಿದ ನಂತರ ಸಂಬಂಧಿತ ಇಬ್ಬರು ಅಧಿಕಾರಿಗಳನ್ನು ತಕ್ಷಣವೇ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page