August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಲಾಲ್ ಬಾಗ್ ಹ್ಯಾಟ್ ಹಿಲ್ ಅಪಾರ್ಟ್‌ಮೆಂಟ್ ನ ಮೂರು ಪ್ಲ್ಯಾಟ್ ಗಳಲ್ಲಿ ಕಳ್ಳತನ

ರೂಪಾಯಿ 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ, ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವು

ಕೇವಲ 20 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶ ಪಡಿಸಿದ  ಮಂಗಳೂರು ಪೊಲೀಸರು

ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇರೆಬೈಲ್ ಗ್ರಾಮದಲ್ಲಿರುವ ಲಾಲ್ ಬಾಗ್ ಹ್ಯಾಟ್ ಹಿಲ್ ನ 3 ಫ್ಲಾಟ್‌ಗಳಲ್ಲಿ ಅಕ್ಟೋಬರ್ 19/20 ರಂದು ರಾತ್ರಿ ನಡೆದ ಕಳ್ಳತನ ಪ್ರಕರಣದಲ್ಲಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು, ನಗದು, ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನವಾಗಿತ್ತು.

ರಿಯಾಜ್ ರಶೀದ್ ರವರ ದೂರಿನ ಮೇರೆಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 20ರಂದು ಸೋಮವಾರ ಬೆಳಗ್ಗೆ ಪ್ರಕರಣ ದಾಖಲಿಸಿ, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿಶೇಷ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ, ಶೀಘ್ರ ಕಾರ್ಯಾಚರಣೆಯಲ್ಲಿ ಕಳ್ಳತನದ ಆರೋಪಿಗಳಾದ ಇಬ್ಬರನ್ನು 20 ಗಂಟೆಯೊಳಗಾಗಿ ಬಂಧಿಸಲಾಯಿತು. ದಸ್ತಗಿರಿಯ ನಂತರ, ಕಳ್ಳತನ ಮಾಡಿದ್ದ ಎಲ್ಲಾ ಚಿನ್ನಾಭರಣಗಳು, ರೂಪಾಯಿ 5000/- ನಗದು, ರೂಪಾಯಿ 70 ಸಾವಿರ ಬೆಲೆಯ 3 ಸಾವಿರ Dirham ಹಾಗೂ ಮೊಬೈಲ್ ಫೋನ್ ನನ್ನು ವಶಕ್ಕೆ ಪಡೆಯಲಾಗಿದೆ.

ದಸ್ತಗಿರಿಯಾದ ಆರೋಪಿಗಳು:

ಅಸ್ಸಾಂನ ಕಾಚಾರ್ ಜಿಲ್ಲೆಯ ಮೇಹರ್ ಪುರ್, ಪಾಂಚಗೋರಿ, ಮೇಡಿನೋವಾ ರಸ್ತೆ, ಅಂಬಿಕಾ ಪುರ್ ಪಾರ್ಟ್ 10 ನಿವಾಸಿ 24 ವರ್ಷ ಪ್ರಾಯದ ಅಭಿಜಿತ್ ದಾಸ್ ಮತ್ತು ಮೆಹರ್ ಪುರ್ ಶ್ರೀ ದುರ್ಗಾ ಮಂದಿರ ಹತ್ತಿರದ ನಿವಾಸಿ 21 ವರ್ಷ ಪ್ರಾಯದ ದೇಬಾ ದಾಸ್ ಬಂಧಿತ ಆರೋಪಿಗಳು.

ಅಭಿಜಿತ್ ದಾಸ್ ಮೇಲೆ ಬೆಂಗಳೂರು ಮತ್ತು ಅಸ್ಸಾಂ ಸೇರಿದಂತೆ ಹಲವಾರು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಮೇಲಾಧಿಕಾರಿಗಳ ನಿರ್ದೇಶನದಂತೆ, ಉರ್ವಾ ಪೊಲೀಸರು ಬೆಂಗಳೂರಿನ ಪೊಲೀಸರ ಸಹಕಾರದಿಂದ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮುಂದಿನ ವಿಚಾರಣೆ ಮತ್ತು ಇತರ ಪ್ರಕರಣಗಳಿಗೆ ಸಂಬಂಧಿಸಿದ ತನಿಖೆ ಮುಂದುವರಿಯಲಿದೆ.

ಈ ಶೀಘ್ರ ಕಾರ್ಯಾಚರಣೆಯನ್ನು ಡಿಸಿಪಿ ಕ್ರೈಮ್ ರವರ ಮೇಲ್ವಿಚಾರಣೆಯಲ್ಲಿ, ಕೇಂದ್ರ ಉಪ ವಿಭಾಗದ ಎಸಿಪಿ, ಪಿಐ, ಉರ್ವ ಪೊಲೀಸ್ ಠಾಣಾ ಸಿಬ್ಬಂದಿ ಹಾಗೂ ಶ್ವಾನ ದಳ ಮತ್ತು ಫಿಂಗರ್ ಪ್ರಿಂಟ್ ತಜ್ಞರ ತಂಡ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದೆ.

You may also like

News

ಓಣಂ ಸಂಭ್ರಮದ ನಡುವೆ ದುರಂತ – ತೆರೆದ ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಓಣಂ ಆಚರಣೆಯ ಸಂಭ್ರಮದ ನಡುವೆ ಸಂಭವಿಸಿದ ದಾರುಣ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಕನ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ
News

National Library Day Celebrated at Father Muller Charitable Institutions Mangaluru

The National Library Day was celebrated at Father Muller Charitable Institutions Central Library on 29th August 2026 at 3.00p.m. in

You cannot copy content of this page