August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆಯ ಪಟಾಕಿ ಅಂಗಡಿಗಳಿಂದ ಬೆದರಿಕೆ ಹಾಕಿ ಸುಲಿಗೆ‌ ಮಾಡಲು ಯತ್ನಿಸಿದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ – ಪೊಲೀಸ್ ಕಮಿಷನರ್

ಪಟಾಕಿ ಅಂಗಡಿಗಳಿಂದ ಬೆದರಿಕೆ ಹಾಕಿ ಸುಲಿಗೆ‌ ಮಾಡಲೆತ್ನಿಸಿದ್ದ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ‌ ಸುರತ್ಕಲ್‌ ಮಂಗಳಪೇಟೆ ಫಾಝಿಲ್‌ ಕೊಲೆ ಆರೋಪಿ ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಅಶ್ವಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಜ್ಪೆಯ ಪಟಾಕಿ ಮಾರಾಟ ಮಳಿಗೆಗೆ ಬಂದು ಅದರ‌ ಮಾಲಕ ದಾಮೋದರ ಎಂಬವರಿಗೆ ಬೆದರಿಕೆ ಹಾಕಿ ಹಣ‌ ಸುಲಿಗೆಗೆ ಮುಂದಾಗಿದ್ದಾರೆ. ಈ ಘಟನೆ ಅಕ್ಟೋಬರ್ 22ರಂದು ಬುಧವಾರ ನಡೆದಿದ್ದು, ದಾಮೋದರ್‌ ಅವರು‌ ಆರೋಪಿಗಳಿಗೆ ಹೆದರಿ ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕಿದ್ದರು.

ಇತ್ತೀಚೆಗೆ ವಿಚಾರ ತಿಳಿದು ದಾಮೋದರ್ ರವರಿಗೆ ಪೊಲೀಸರು ರಕ್ಷಣೆ ‌‌ನೀಡುವ ಭರವಸೆ‌ ನೀಡಿದ ಬಳಿಕ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಜ್ಪೆ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

 

You may also like

News

ಓಣಂ ಸಂಭ್ರಮದ ನಡುವೆ ದುರಂತ – ತೆರೆದ ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಓಣಂ ಆಚರಣೆಯ ಸಂಭ್ರಮದ ನಡುವೆ ಸಂಭವಿಸಿದ ದಾರುಣ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಕನ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ
News

National Library Day Celebrated at Father Muller Charitable Institutions Mangaluru

The National Library Day was celebrated at Father Muller Charitable Institutions Central Library on 29th August 2026 at 3.00p.m. in

You cannot copy content of this page