November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೂಲ್ಕಿ‌ ಸೀಮೆ ಅರಸು ಕಂಬಲ ಪುಸ್ತಕ ಬಿಡುಗಡೆ

ಮೂಲ್ಕಿ ಸೀಮೆ ಅರಸು ಕಂಬಳಕ್ಕೆ ಒಟ್ಟು 800 ವರ್ಷಗಳ ಇತಿಹಾಸವಿದೆ. ಸಂಪ್ರದಾಯ ಬಿಡದೇ ಆಧುನಿಕತೆಯೊಂದಿಗೆ ಅರಸು ಕಂಬಳ ನಡೆಸಲಾಗುತ್ತಿದೆ. ಮುಲ್ಕಿ ಅರಸು ಕಂಬಳದ ಬಗ್ಗೆ ಪುಸ್ತಕ ಹೊರತಂದಿರುವುದು ಶ್ಲಾಘನೀಯ ಎಂದು ಮುಲ್ಕಿ ಸೀಮೆ ಅರಸರಾದ ಎಂ. ದುಗ್ಗಣ್ಣ ಸಾವಂತರು ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಇಂದು ಅಕ್ಟೋಬರ್ 24ರಂದು ಶುಕ್ರವಾರ ನಡೆದ ಕೊಲ್ನಾಡುಗುತ್ತು ರಾಮಚಂದ್ರ ನಾಯ್ಕ್ ಗೌರವ ಸಂಪಾದಕತ್ವದ ‘ಮೂಲ್ಕಿ ಸೀಮೆ ಅರಸು ಕಂಬುಲ’ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿಂದಿನ ಕಾಲದಲ್ಲಿ ಅರಮನೆ, ಬೀಡು ಇದ್ದ ಎಲ್ಲ ಕಡೆ ಕಂಬಳ ನಡೆಯುತ್ತಿತ್ತು.  1971ರಲ್ಲಿ ಭೂಸುಧಾರಣೆ ಕಾಯ್ದೆ ಜಾರಿಗೊಳ್ಳುವವರೆಗೆ ಈ ಕಂಬಳಗಳು ನಡೆಯುತ್ತಿದ್ದವು. ಪ್ರಸ್ತುತ ಅಳದಂಗಡಿ, ಮುಲ್ಕಿ ಅರಮನೆಯಲ್ಲಿ ಕಂಬಳ ನಡೆಯುತ್ತಿದೆ ಎಂದರು. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಕಾರ್ನಾಡು ಶ್ರೀ ಹರಿಹರ ದೇವಸ್ಥಾನದ ಮೊಕ್ತೇಸರ ಎಂ.ಎಚ್. ಅರವಿಂದ ಪೂಂಜ, ಅರಸು ಕಂಬಳ ಹಿಂದೆ ನಡೆಯುತ್ತಿದ್ದಂತೆ ವಿಜೃಂಭಣೆಯಿಂದ ನಡೆಯಬೇಕು. ದಿನಾಂಕ ಸಹಿತ ಈ ಬಗ್ಗೆ ಯಾವುದೇ ಗೊಂದಲ ಇರಬಾರದು ಎಂದರು.

ಪುಸ್ತಕದ ಬಗ್ಗೆ ಮಾತನಾಡಿದ ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಮೂಲ್ಕಿ ಸೀಮೆ ಅರಸು ಕಂಬಲ ಪುಸ್ತಕದ ಮೂಲಕ ಮುಲ್ಕಿ ಅರಸು ಕಂಬಳದ ದಾಖಲೀಕರಣ ಆಗಿದೆ. ಕಳೆದ 40 ವರ್ಷಗಳ ಕಂಬಳದ ಸಭೆಗಳು, ಕಂಬಳದ ದಾನಿಗಳು, ಸಂಕಷ್ಟದ ಬಗ್ಗೆ ದಾಖಲೀಕರಣ ಆಗಿದೆ. ಕಂಬಳದ ಆಚರಣೆಗಳಿಗೆ ಪುಸ್ತಕದಲ್ಲಿ ಸೂಕ್ತ ವ್ಯಾಖ್ಯಾನ ಒದಗಿಸಲಾಗಿದೆ. ವಿದ್ಯಾರ್ಥಿಗಳಿಗೆ ಪಠ್ಯವಾಗುವ ಅರ್ಹತೆ ಈ ಪುಸ್ತಕಕ್ಕಿದೆ. ತುಳುನಾಡಿನಲ್ಲಿ ಕಂಬಳ ಸಾಮರಸ್ಯಕ್ಕೂ ಕಾರಣವಾಗಿದೆ ಎಂದು ಹೇಳಿದರು.

ಪುಸ್ತಕ ಹೊರತರಲು ಸಹಕಾರ ನೀಡಿದವರನ್ನು ಈ ವೇಳೆ ಗೌರವಿಸಲಾಯಿತು. ಪುಸ್ತಕದ ಗೌರವ ಸಂಪಾದಕ ಕೊಲ್ನಾಡುಗುತ್ತು ರಾಮಚಂದ್ರ ನಾಯ್ಕ್ ಸ್ವಾಗತಿಸಿದರು. ಪ್ರಧಾನ ಸಂಪಾದಕಿ ಡಾ. ಸಾಯಿಗೀತಾ ಹೆಗ್ಡೆ ವಂದಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರೂಪಿಸಿದರು.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page