ಉಪ್ಪಳಿಗೆ ದೀಪೋತ್ಸವ ಭಾಷಣ ವಿವಾದ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು
ಉಪ್ಪಳಿಗೆಯಲ್ಲಿ ಅಕ್ಟೋಬರ್ 20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್. ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ರವರು ಮಾಡಿದ ಭಾಷಣವು ಧಾರ್ಮಿಕ ದ್ವೇಷ ಪ್ರಚೋದಿಸುವಂತದ್ದಾಗಿದ್ದು, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಮತ್ತು ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವ ಸ್ವರೂಪದಾಗಿದೆ ಎಂದು ಆರೋಪಿಸಲಾಗಿದೆ.





ಅವರು ತಮ್ಮ ಭಾಷಣದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಕುರಿತು ಅವಮಾನಕಾರಿ ಹೇಳಿಕೆಗಳನ್ನು ನೀಡಿದ್ದು, ಮತದಾರರ ಸಂಖ್ಯೆಯ ಉಲ್ಲೇಖದ ಮೂಲಕ ಧಾರ್ಮಿಕ ವೈಮನಸ್ಸು ಉಂಟುಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಅವರ ಈ ಭಾಷಣವು ‘ಕಹಳೆ ನ್ಯೂಸ್’ ಯೂಟ್ಯೂಬ್ ಚಾನೆಲ್ ಮೂಲಕ ಪ್ರಸಾರಗೊಂಡಿದೆ.


ಈ ಹಿನ್ನೆಲೆಯಲ್ಲಿ ದೂರುದಾರರಾದ ಪುತ್ತೂರು ತಾಲೂಕು ಈಶ್ವರಿ ಪದ್ಮುಂಜರವರ ದೂರಿನ ಆಧಾರದ ಮೇಲೆ ಅಕ್ಟೋಬರ್ 25ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2025 ಅಡಿ ಭಾರತೀಯ ನ್ಯಾಯ ಸಂಹಿತೆ (BNS) 79, 196, 299, 302 ಹಾಗೂ 3(5) ಕಲಂಗಳಡಿ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಲಾಗಿದೆ.




