April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಿರ್ವ ಪೊಲೀಸ್ ಠಾಣೆಯ ASI ಪುತ್ರಿ ಅಪಘಾತದಲ್ಲಿ ಮೃತ್ಯು

ಉಡುಪಿ ನಗರದ ನಿಟ್ಟೂರು ಕೆಎಸ್‌ಆರ್‌ಟಿಸಿ ಡಿಪ್ಪೋ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಕ್ಟೋಬರ್ 26ರಂದು ಭಾನುವಾರ ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.‌ ಮೃತರನ್ನು ಶಿರ್ವ ಪೊಲೀಸ್ ಠಾಣಾ ASI ಸುದೇಶ್ ಶೆಟ್ಟಿಯವರ ಮಗಳು 24 ವರ್ಷ ಪ್ರಾಯದ ಸ್ಪರ್ಷ ಎಂದು ತಿಳಿಯಲಾಗಿದೆ. ಮೃತರ ತಾಯಿ 49 ವರ್ಷ ಪ್ರಾಯದ ಶರ್ಮಿಳಾ ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಎದುರಿನಿಂದ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಸವಾರರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು, ಗಾಯಗೊಂಡ ಶರ್ಮಿಳಾ ಮತ್ತು ಸ್ಪರ್ಷರವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಸ್ಪರ್ಷ ಚಿಕಿತ್ಸೆ ಫಲಕಾರಿಯಾಗದೆ ಇಂದು ಅಕ್ಟೋಬರ್ 27ರಂದು ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page