ದ್ವೇಷ ಭಾಷಣ ಪ್ರಕರಣ – ಕಲ್ಲಡ್ಕ ಪ್ರಭಾಕರ ಭಟ್ ರವರಿಗೆ ಮಧ್ಯಂತರ ಆದೇಶ ನೀಡಿದ ಪುತ್ತೂರು ಘನ ನ್ಯಾಯಾಲಯ
ಪ್ರತಿಷ್ಠಿತ ವಕೀಲರಾದ ಕಜೆ ಲಾ ಚೇಂಬರ್ಸ್ ಇದರ ಮುಖ್ಯಸ್ಥರಾದ ಮಹೇಶ್ ಕಜೆಯವರ ವಾದವನ್ನು ಆಲಿಸಿದ ನ್ಯಾಯಾಧೀಶರು

ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ RSS ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ನ್ಯಾಯಾಲಯದಲ್ಲಿ ಮುಂದಿನ ವಿಚಾರಣೆ ನಡೆಯುವ ತನಕ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳದಂತೆ ಪ್ರತಿವಾದಿ ಪೊಲೀಸರಿಗೆ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ನಿರ್ದೇಶಿಸಿದೆ.




ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಪುಭಾಕರ ಭಟ್ ವಿರುದ್ಧ FIR ದಾಖಲಾಗಿತ್ತು. ಅಲ್ಲದೆ, ಕೇಸು ದಾಖಲು ಹಿನ್ನೆಲೆಯಲ್ಲಿ ಅಕ್ಟೋಬರ್ 30ರಂದು ಗುರುವಾರ ವಿಚಾರಣೆಗೆ ಪೊಲೀಸ್ ಠಾಣೆಗೆ ಹಾಜರಾಗುವಂತೆ ಪೊಲೀಸರು ಪ್ರಭಾಕರ ಭಟ್ ರವರಿಗೆ ನೋಟೀಸ್ ನೀಡಿದ್ದರು.


ಇದರ ಬೆನ್ನಲ್ಲೇ ಪುತ್ತೂರು ಸೆಶನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಪುಭಾಕರ ಭಟ್ ಪರವಾಗಿ ಪುತ್ತೂರಿನ ಪ್ರತಿಷ್ಠಿತ ವಕೀಲರಾದ ಕಜೆ ಲಾ ಚೇಂಬರ್ಸ್ ಇದರ ಮುಖ್ಯಸ್ಥರಾದ ಮಹೇಶ್ ಕಜೆಯವರು ವಾದವನ್ನು ಮಂಡಿಸಿದ್ದರು. ವಾದವನ್ನು ಆಲಿಸಿದ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ಘನ ನ್ಯಾಯಾಲಯದ ನ್ಯಾಯಾಧೀಶರು ಮುಂದಿನ ವಿಚಾರಣೆಯ ತನಕ ಬಲವಂತದ ಕ್ರಮ ಬೇಡವೆಂದು ಪೊಲೀಸರಿಗೆ ನಿರ್ದೇಶಿಸಿ ಮಧ್ಯತಂರ ಆದೇಶ ನೀಡಿದ್ದಾರೆ.




