ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಯವರ ಬಗ್ಗೆ ಅಸಭ್ಯ ಪೋಸ್ಟ್
ಸುಳ್ಯ ಪೊಲೀಸರಿಂದ ಆರೋಪಿ ಬರಿಮಾರು ಪುರುಷೋತ್ತಮ ಆಚಾರ್ಯನ ಬಂಧನ

ಸಾಮಾಜಿಕ ಜಾಲತಾಣ Facebook ನಲ್ಲಿ “Purush Acharya” ಎಂಬ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ಹಾಗೂ ಮಾನ್ಯ ಮುಖ್ಯಮಂತ್ರಿಯವರ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದನಾತ್ಮಕ ಪೋಸ್ಟ್ ಮಾಡಿರುವ ಕುರಿತು ಪ್ರಕರಣ ದಾಖಲಾಗಿದೆ. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 112/2025 (ಕಲಂ 296, 196, 354 BNS) ಹಾಗೂ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ 55/2025 (ಕಲಂ 353(3), 353(4) BNS) ಅಡಿ ಪ್ರಕರಣಗಳು ದಾಖಲಾಗಿವೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಸಹಕಾರದೊಂದಿಗೆ, ಸುಳ್ಯ ಪೊಲೀಸರು ಬಂಟ್ವಾಳ ತಾಲೂಕು ಬರಿಮಾರು ಮೂಲದ ಪುರುಷೋತ್ತಮ ಆಚಾರ್ಯ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.





