ಮಲ್ಪೆ ಪೊಲೀಸ್ ಠಾಣೆಯ ASI ವಿಶ್ವನಾಥ್ ಹೃದಯಾಘಾತದಿಂದ ನಿಧನ
ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ 58 ವರ್ಷ ಪ್ರಾಯದ ASI ವಿಶ್ವನಾಥ್ ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.

ನವಂಬರ್ 01ರಂದು ಶನಿವಾರ ರಾತ್ರಿ ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದ್ದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಹೃದಯಾಘಾತದಿಂದ ವಿಶ್ವನಾಥ್ ರವರು ಮೃತಪಟ್ಟಿದ್ದಾರೆ.
ವಿಶ್ವನಾಥ್ ಇತ್ತೀಚೆಗಷ್ಟೇ ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ವಿಶ್ವನಾಥ್ ರವರು ಜನಸಾಮಾನ್ಯರಿಗೆ ಹತ್ತಿರವಾಗಿದ್ದರು. ಅವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತವಾಗಿದೆ.




