August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭಟ್ಕಳದ ಕುಂಟುವಾಣಿ ಶಾಲೆಯಲ್ಲಿ ಮಾದಕ ವಸ್ತು ಮತ್ತು ಸೈಬರ್ ಅಪರಾಧ ತಡೆಗೆ – ಪೊಲೀಸ್ ಇಲಾಖೆಯ ಜನಜಾಗೃತಿಯ ಉಪನ್ಯಾಸ

ಕುಂಟುವಾಣಿಯ ಪ್ರೌಢ ಶಾಲೆಯಲ್ಲಿ ನವಂಬರ್ 4ರಂದು ಮಂಗಳವಾರ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯವರಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಸೈಬರ್ ಅಪರಾಧಗಳ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ಮತ್ತು ಸುರಕ್ಷಿತ ಜೀವನದ ಅರಿವು ಮೂಡಿಸುವ ಉದ್ದೇಶದಿಂದ ಈ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು.

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ಮತ್ತು ಸುರಕ್ಷಿತ ಜೀವನದ ಅರಿವು ಮೂಡಿಸಿದ ಕಾರ್ಯಕ್ರಮ:

ಭಟ್ಕಳ ಗ್ರಾಮಾಂತರ ಪೋಲಿಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಲಿಂಗರೆಡ್ಡಿಯವರು ಮಾತನಾಡಿ “ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯ, ಮನೋಸ್ಥಿತಿ ಮತ್ತು ಸಮಾಜದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ. ಇಂತಹ ವ್ಯಸನಗಳಿಂದ ಯುವಕರು ತಮ್ಮ ಭವಿಷ್ಯವನ್ನು ನಾಶಮಾಡಿಕೊಳ್ಳುತ್ತಿದ್ದಾರೆ. ಅದರಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸುವುದು ಅಗತ್ಯ. ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ಮಾಹಿತಿಯನ್ನು ನಿರ್ಲಕ್ಷ್ಯವಾಗಿ ಹಂಚಿಕೊಳ್ಳುವುದು ಅಪಾಯಕಾರಿ. ಪಾಸ್‌ವರ್ಡ್‌ಗಳ ಸುರಕ್ಷತೆ, ಅಜ್ಞಾತ ಲಿಂಕ್‌ಗಳಿಂದ ದೂರವಿರುವುದು ಮತ್ತು ಆನ್‌ಲೈನ್ ವಂಚನೆಗಳಿಂದ ಎಚ್ಚರಿಕೆ ವಹಿಸುವುದು ಅತ್ಯಗತ್ಯ,” ಎಂದು ಹೇಳಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉತ್ಸಾಹದಿಂದ ಭಾಗವಹಿಸಿ ಪೊಲೀಸರ ಮಾರ್ಗದರ್ಶನವನ್ನು ಮೆಚ್ಚಿದರು.

 

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page