August 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಎತ್ತರ ಜಿಗಿತದಲ್ಲಿ ಅಶ್ಮಿತಾ ಸುವಾರಿಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಥೊಲಿಕ್ ಸಭಾ ಸೂರಿಕುಮೇರು ಘಟಕದಿಂದ ಅಭಿನಂದನೆ


ಸೂರಿಕುಮೇರು ಚರ್ಚ್ ವ್ಯಾಪ್ತಿಯ ಅರುಣ್ ಮತ್ತು ಪ್ರೀತಿ ಸುವಾರಿಸ್ ದಂಪತಿ ಪುತ್ರಿ ಅಶ್ಮಿತಾ ಸುವಾರಿಸ್ ಬಂಟ್ವಾಳ ತಾಲೂಕು ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಅಶ್ಮಿತಾರವರ ಯಶಸ್ಸಿನ ಹಿನ್ನೆಲೆಯಲ್ಲಿ ಸೂರಿಕುಮೇರು ಚರ್ಚ್ ನ ಕಥೊಲಿಕ್ ಸಭಾ ಸಂಘಟನೆಯು ಸಂತೋಷ ವ್ಯಕ್ತಪಡಿಸಿ, ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಸ್ಪರ್ಧಾಳುಗಳಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಶ್ಮಿತಾ ಸುವಾರಿಸ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಈ ಸಾಧನೆ ಅವರ ಪರಿಶ್ರಮ, ತಾಳ್ಮೆ ಮತ್ತು ಪೋಷಕರ ಪ್ರೋತ್ಸಾಹದ ಫಲವಾಗಿದೆ. ಇಂತಹ ಯುವ ಪ್ರತಿಭೆಗಳು ಭವಿಷ್ಯದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಕೀರ್ತಿ ತರುವ ವಿಶ್ವಾಸ ನನಗಿದೆ,” ಎಂದು ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನ ಕಥೊಲಿಕ್ ಸಭಾ ಘಟಕದ ಅಧ್ಯಕ್ಷ ಎಲಿಯಾಸ್ ಪಿರೇರಾ ಹೇಳಿದರು.


“ಅಶ್ಮಿತಾ ಅವರ ಸಾಧನೆಗೆ ಸ್ಥಳೀಯರು, ಶಿಕ್ಷಕರು ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ತಾಲೂಕು ಮಟ್ಟದಲ್ಲಿ ತೋರಿಸಿದ ಶ್ರೇಷ್ಠ ಪ್ರದರ್ಶನ ಮುಂದಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಯಶಸ್ಸು ತಂದುಕೊಡಲಿ ಎಂದು ಎಲ್ಲರೂ ಹಾರೈಸಿದ್ದಾರೆ. ಅಶ್ಮಿತಾರವರ ಶ್ರಮ ಮತ್ತು ಸಾಧನೆ ಊರಿನ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ” ಎಂದು ಸೂರಿಕುಮೇರು ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್ ಹಾಗೂ ಕಾರ್ಯದರ್ಶಿ ಸ್ಟೀವನ್ ಆಲ್ವಿನ್ ಪಾಯ್ಸ್ ಇವರು ಹೇಳಿ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.

You may also like

News

ತ್ರಿಷಾ ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‌ನ 28ನೇ ಸಂಸ್ಥಾಪನಾ ದಿನಾಚರಣೆ ಬಲ್ಮಠದ ಡಾನ್ ಬಾಸ್ಕೊ ಸಭಾಂಗಣದಲ್ಲಿ ಸಂಭ್ರಮ ಹಾಗೂ ವೈಭವದಿಂದ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸ್ವಾಗತ
News

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ‘ನರ್ಚರ್ 2026’ – ಮಕ್ಕಳ ರಾಷ್ಟ್ರೀಯ ವೈದ್ಯಕೀಯ ವಿಚಾರ ಸಂಕಿರಣ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದ ವತಿಯಿಂದ ನರ್ಚರ್ 2026 – ಮಕ್ಕಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರವನ್ನು

You cannot copy content of this page