July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು CCB ಪೊಲೀಸರ ಕಾರ್ಯಾಚರಣೆ – ಇಬ್ಬರ ಬಂಧನ

ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸರಬರಾಜು

ನಿಷೇದಿತ ಮಾದಕ ವಸ್ತುವಾದ MDMA ನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು CCB ಪೊಲೀಸರು ದಸ್ತಗಿರಿ ಮಾಡಿ ಅವರಿಂದ 24.57 ಗ್ರಾಂ ತೂಕದ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ನವಂಬರ್ 4ರಂದು ಮಂಗಳವಾರ ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಎಸ್.ಹೆಚ್. ನಗರ, ದಯಾಂಬು, ಅಡ್ಯಾರ್ ಕಣ್ಣೂರು ನಿವಾಸಿ 39 ವರ್ಷ ಪ್ರಾಯದ ಆಟೋ ಅಬ್ದುಲ್ ಸಲಾಮ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂಪಾಯಿ 1,20,000/- ಮೌಲ್ಯದ ನಿಷೇದಿತ ಮಾದಕ ವಸ್ತುವಾದ MDMA, ಆಟೋ ರಿಕ್ಷಾ, ಮೊಬೈಲ್ ಫೋನ್, ತೂಕಮಾಪನ, ಖಾಲಿ ಜಿಪ್ ಲಾಕ್ ಕವರ್ ಸಹಿತ ಒಟ್ಟು ರೂಪಾಯಿ 2,30,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಇನ್ನೊಂದು ಪ್ರಕರಣದಲ್ಲಿ ನವಂಬರ್ 6ರಂದು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೋಳಿಯಾರು ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ CCB ಪೊಲೀಸರು ಜಾರದಗುಡ್ಡೆ ಹೌಸ್, ಬೋಳಿಯಾರು, ಉಳ್ಳಾಲ ತಾಲೂಕು ನಿವಾಸಿ 28 ವರ್ಷ ಪ್ರಾಯದ ಮೊಹಮ್ಮದ್ ನಾಸೀರ್ @ ಶಾಕೀರ್@ ಚಾಕಿ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ರೂಪಾಯಿ 1,20,000/- ಮೌಲ್ಯದ ನಿಷೇದಿತ ಮಾದಕ ವಸ್ತುವಾದ MDMA, ಕಪ್ಪು ಬಣ್ಣದ ಯಮಹಾ ಕಂಪೆನಿಯ ಯಮಹಾ FZ ಬೈಕ್, ಮೊಬೈಲ್ ಫೋನ್, ಖಾಲಿ ಜೆಪ್ ಲಾಕ್ ಕವರ್, ಸಹಿತ ಒಟ್ಟು ರೂಪಾಯಿ 2,05,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು MDMA ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ CCB ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page