August 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ

ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಗೆ ಸಂಬಂಧಿಸಿದಂತೆ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳ ಪಟ್ಟಿ ಚುನಾವಣಾಧಿಕಾರಿಗಳ ಕಚೇರಿಯಿಂದ ಅಧಿಕೃತವಾಗಿ ಪ್ರಕಟಗೊಂಡಿದ್ದು, ನಾಳೆ ನವಂಬರ್ 9ರಂದು ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾ ಇಲಾಖಾ ಕಚೇರಿಯಲ್ಲಿ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧವಾಗಿದ್ದು ಘಟಾನುಘಟಿಗಳ ನಡುವೆ ಫೈಟ್ ನಡೆಯಲಿದೆ.

 

ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು — ಪುಷ್ಪರಾಜ್ ಬಿ.ಎನ್. ಮತ್ತು ಶ್ರವಣ್ ಕುಮಾರ್ ಕೆ. — ನಾಮಪತ್ರ ಸಲ್ಲಿಸಿದ್ದು, ಈ ಹುದ್ದೆಗೆ ನೇರ ಸ್ಪರ್ಧೆ ನಡೆಯಲಿದೆ.

ಉಪಾಧ್ಯಕ್ಷ ಸ್ಥಾನಗಳಿಗೆ (3 ಹುದ್ದೆಗಳು) — ವಿಲ್ಫೆಡ್ ಡಿಸೋಜ, ಮುಹಮ್ಮದ್ ಆರೀಫ್, ಐ.ಬಿ. ಸಂದೀಪ್ ಕುಮಾರ್, ಗಂಗಾಧರ ಕಲ್ಲಪಳ್ಳಿ ಮತ್ತು ರಾಜೇಶ್ ಶೆಟ್ಟಿ ಎಂಬ ಐವರು ಸ್ಪರ್ಧೆಯಲ್ಲಿದ್ದಾರೆ.

ಕಾರ್ಯದರ್ಶಿ ಹುದ್ದೆಗಳಿಗೆ (3) — ಎ. ಸಿದ್ದಿಕ್ ನೀರಾಜೆ, ರಾಜೇಶ್ ಕುಮಾರ್ ಡಿ., ಸುರೇಶ್ ಡಿ. ಪಳ್ಳಿ ಹಾಗೂ ಸತೀಶ್ ಇರಾ ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ — ಶ್ರೀನಿವಾಸ ನಾಯಕ್ ಕೆ. ಮತ್ತು ಮುಹಮ್ಮದ್ ಅನ್ಸಾರ್ ಇನೋಳಿ ಎಂಬ ಇಬ್ಬರು ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೆ (15 ಹುದ್ದೆಗಳು) — ಒಟ್ಟು 21 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಅಶೋಕ್ ಶೆಟ್ಟಿ ಬಿ.ಎನ್., ಸಂದೇಶ್ ಜಾರ, ಪ್ರಕಾಶ್ ಸುವರ್ಣ, ಸಂದೀಪ್ ಕುಮಾರ್ ಎಂ., ಲಕ್ಷ್ಮೀನಾರಾಯಣ ರಾವ್, ಹರೀಶ್ ಮೋಟುಕಾನ, ಶಶಿಧರ ಬಂಗೇರ, ದಿವಾಕರ ಪದ್ಮುಂಜ, ಕಿರಣ್ ಯು. ಸಿರ್ಸೀಕರ್, ಅಭಿಷೇಕ್ ಎಚ್‌.ಎಸ್‌., ಜಯಶ್ರೀ, ಮಂಜುನಾಥ್ ಕೆ.ಪಿ., ಭುವನೇಶ್ವರ ಜಿ., ಸಂದೀಪ್ ವಾಗ್ಲೆ, ಪ್ರವೀಣ್ ರಾಜ್ ಕೆ.ಎಸ್‌., ಹರೀಶ್ ಕೆ. ಆದೂರ್, ಲೋಕೇಶ್ ಸುರತ್ಕಲ್, ಗಿರೀಶ್ ಅಡ್ಪಂಗಾಯ, ಶೇಕ್ ಜೈನುದ್ದೀನ್, ಸಂದೀಪ್ ಸಾಲ್ಯಾನ್ ಮತ್ತು ಆರೀಫ್ ಕಲ್ಕಟ್ಟ ಸೇರಿದಂತೆ ಹಲವು ಹೆಸರುಗಳಿವೆ.

ಇದರ ಜೊತೆಗೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೇಶ್ ಕೆ. ಪೂಜಾರಿ ಹಾಗೂ ಕೋಶಾಧಿಕಾರಿ ಹುದ್ದೆಗೆ ವಿಜಯ, ಬೇರೆ ಯಾರೂ ನಾಮಪತ್ರ ಸಲ್ಲಿಸದಿರುವುದರಿಂದ ಇವರಿಬ್ಬರು ಅವಿರೋಧವಾಗಿ ಈಗಾಗಲೆ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯು ಶಾಂತಿಪೂರ್ಣವಾಗಿ, ನ್ಯಾಯಸಮ್ಮತ ರೀತಿಯಲ್ಲಿ ನಡೆಯುವಂತೆ ಎಲ್ಲಾ ಸದಸ್ಯರಿಗೆ ಕರೆ ನೀಡಲಾಗಿದೆ ಎಂದು ಸಂಘದ ಮೂಲಗಳು ತಿಳಿಸಿವೆ.

You may also like

News

ನೇಪಾಳದ ದುಃಖದಲ್ಲಿ ಮಂಗಳೂರು ಧರ್ಮಕ್ಷೇತ್ರವೂ ಭಾಗಿ – ವಿಶೇಷ ಪ್ರಾರ್ಥನೆಗೆ ಬಿಷಪ್ ಸಲ್ಡಾನ್ಹಾ ಕರೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ರೂಪೇಶ್ ಮಾಡ್ತಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ಮಂಗಳೂರು: ನೇಪಾಳದ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ
News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.

You cannot copy content of this page