June 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ B.N. ಬಹುಮತದಿಂದ ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ.), ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ 2025-28 ಚುನಾವಣೆಯು ನಿನ್ನೆ ನವಂಬರ್ 09ರಂದು ಮಂಗಳೂರಿನ ವಾರ್ತಾ ಇಲಾಖಾ ಕಚೇರಿಯಲ್ಲಿ ನಡೆಯಿತು.

ವಾರ್ತಾ ಭಾರತಿಯ ಹಿರಿಯ ವರದಿಗಾರ ಪುಷ್ಪರಾಜ ಬಿ.ಎನ್.ರವರು 2025–2028ರ ಅವಧಿಗೆ ನೂತನ ಅಧ್ಯಕ್ಷರಾಗಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಸುಮಾರು 30 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿರುವ ಪುಷ್ಪರಾಜರವರು ಈ ಹಿಂದೆ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು.

ಬೆಳಿಗ್ಗೆ 9 ರಿಂದ ಮಧ್ಯಾಹ್ನ 3ರ ತನಕ ನಡೆದ ಚುನಾವಣಾ ಪ್ರಕ್ರಿಯೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿ ಖಾದರ್ ಶಾರವರ ನೇತೃತ್ವದಲ್ಲಿ ಆಚ್ಚುಕಟ್ಟಾಗಿ ನಡೆಸಲಾಗಿದ್ದು ಚುನಾವಣೆಯ ಬಳಿಕ ಫಲಿತಾಂಶವನ್ನು ಘೋಷಿಸಲಾಯಿತು.

ಹಿಂದಿನ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆಯವರು ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ರಾಜೇಶ್ ಪೂಜಾರಿಯವರು ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ವಿಜಯ ಕೋಟಿಯನ್ ರವರು ಖಜಾಂಚಿಯಾಗಿ ಅವಿರೋಧವಾಗಿ ಮೊದಲೇ ಆಯ್ಕೆಯಾಗಿದ್ದರು.

ವಿಲ್ಫ್ರೆಡ್ ಡಿಸೋಜ, ಮುಹಮ್ಮದ್ ಅರಿಫ್ ಮತ್ತು ರಾಜೇಶ್ ಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆಯಾದರೆ, ಎ. ಸಿದ್ದೀಕ್ ನೀರಾಜೆ, ಸುರೇಶ್ ಡಿ. ಪಳ್ಳಿ ಹಾಗೂ ಸತೀಶ ಇರಾ ಕಾರ್ಯದರ್ಶಿಗಳಾಗಿ ಆಯ್ಕೆಯಾದರು.

ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನ ವಿಜೇತ ಅಭ್ಯರ್ಥಿಗಳು: ಅಶೋಕ್ ಶೆಟ್ಟಿ ಬಿ.ಎನ್., ಸಂದೇಶ್ ಜಾರ, ಸಂದೀಪ್ ಕುಮಾರ್ ಎಂ., ಲಕ್ಷ್ಮೀನಾರಾಯಣ ರಾವ್, ಹರೀಶ್ ಮೊಟುಕಾನ, ದಿವಾಕರ ಪದ್ಮುಂಜ, ಕಿರಣ್ ಯು. ಸಿರ್ಸಿಕರ್, ಅಭಿಷೇಕ್ ಎಚ್.ಎಸ್., ಜಯಶ್ರೀ, ಭುವನೇಶ್ವರ್ ಜಿ., ಸಂದೀಪ್ ವಾಗ್ಲೆ, ಹರೀಶ್ ಕೆ. ಆದೂರು, ಗಿರೀಶ್ ಅಡ್ಪಂಗಾಯ, ಸಂದೀಪ್ ಸಾಲ್ಯಾನ್ ಮತ್ತು ಆರೀಫ್ ಕಲ್ಕಟ್ಟ ಇವರೆಲ್ಲರೂ ಆಯ್ಕೆಯಾದರು.

 

 

 

 

ವಿಜೇತರಾದ ನೂತನ ಅಧ್ಯಕ್ಷ, ಪ್ರದಾನ ಕಾರ್ಯದರ್ಶಿ, ಉಪಾಧ್ಯಕ್ಷರುಗಳು, ಕಾರ್ಯದರ್ಶಿಗಳು, ಕೋಶಾಧಿಕಾರಿ, ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಹಾಗೂ ಎಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಿಗೂ ಚುನಾವಣಾಧಿಕಾರಿಗಳಾದ ಖಾದರ್ ಶಾರವರು ಅಭಿನಂದನೆಗಳನ್ನು ಸಲ್ಲಿಸಿ, ಚುನಾವಣೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.

ಈ ಮೂಲಕ ಹೊಸ ನೇತೃತ್ವದೊಂದಿಗೆ ದಕ್ಷಿಣ ಕನ್ನಡ ಪತ್ರಕರ್ತರ ಸಂಘವು ತನ್ನ ಹೊಸ ಅವಧಿಗೆ ಚಾಲನೆ ನೀಡಿದೆ.

You may also like

News

ಕೋಳಿ ಅಂಕದ ಜೂಜಾಟದ ಅಡ್ಡೆಗೆ ವಿಟ್ಲ ಪೊಲೀಸರ ದಿಢೀರ್ ದಾಳಿ – ಮೂವರ ಬಂಧನ, ಸೊತ್ತುಗಳ ವಶ

ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ ಹಣ ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಜಾಗಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವ
News

Thousands Gather in Faith and Devotion as Saint Anthony’s Minor Basilica, Dornahalli Celebrates Grand Annual Feast 2026

Amid an atmosphere of deep faith, prayer, and jubilation, thousands of devotees from across Karnataka and neighbouring states converged at

You cannot copy content of this page