July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 72ನೇ ಸಹಕಾರಿ ಸಪ್ತಾಹಕ್ಕೆ ಚಾಲನೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಂದ್ರ ಪ್ರಸಾದ್ ರವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಗೌರವ ಪ್ರಧಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ದಕ್ಷಿಣ ಕನ್ನಡ ಜಿಲ್ಲಾ ಯೂನಿಯನ್, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಹಾಲು ಉತ್ಪಾದಕರ ಸಹಕಾರಿ ಸಂಘಗಳು ಹಾಗೂ ಇನ್ನಿತರ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಡಾ. ಎನ್.ಎಂ. ರಾಜೇಂದ್ರ ಕುಮಾರ್ ಮಾರ್ಗ ದರ್ಶನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಉದ್ಘಾಟನಾ ಸಮಾರಂಭ ನವಂಬರ್ 14 ರಂದು ಶುಕ್ರವಾರ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾ ಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜಾರವರು ಸಹಕಾರಿ ಸಪ್ತಾಹವನ್ನು ಉದ್ಘಾಟಿಸಿ ಶುಭಕೋರಿದರು. ದಕ್ಷಿಣ ಕನ್ನಡ ಜಿಲ್ಲಾ ಯೂನಿಯನ್ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಪ್ರಭಾಕರ ಅರಂಬೋಡಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಹೆಚ್.ಎನ್. ರಮೇಶ್, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಎಸ್.ಎಂ. ರಘು, ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಬೆಳ್ತಂಗಡಿ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್, ಮಡಂತ್ಯಾರು ಸೆಕ್ರೇಡ್ ಹಾರ್ಟ್ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಡಾ. ಸ್ಟ್ಯಾನಿ ಗೋವಿಯಸ್ ಉಪಸ್ಥಿತರಿದ್ದರು.

ಈ ವೇಳೆ ಉತ್ತಮ ಕೃಷಿಕರಿಗೆ ವಿಶೇಷ ಗೌರವ ಪುರಸ್ಕಾರ, ಉತ್ತಮ ಹೈನುಗಾರಿಕೆ ಸಾಧಕರಿಗೆ ಪುರಸ್ಕಾರ, ಸದಸ್ಯರಿಗೆ ವಿಶೇಷ ಗೌರವ, 3 ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪ್ರಥಮ ಆಧ್ಯತೆಯಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಂದ್ರ ಪ್ರಸಾದ್ ರವರಿಗೆ ಕಾಯಕ ದೀಕ್ಷಾಮಣಿ ವಿಶೇಷ ಗೌರವ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಸಪ್ತಾಹದ ವಿಶೇಷತೆಯಾಗಿ ಮೂಡಬಿದ್ರೆ ಶ್ರೀ ಧವಳ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಸಂತೋಷ್ ಶೆಟ್ಟಿ ಕಾರ್ಯಾದಕ್ಷತೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ನೀಲಯ ಎಂ. ಅಗರಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹಿರೇಮಠ, ಮಡಂತ್ಯಾರು ಸಿ.ಎ. ಬ್ಯಾಂಕ್ ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜ, ದಕ್ಷಿಣ ಕನ್ನಡ ಜಿಲ್ಲಾ ಬ್ಯಾಂಕ್ ಪ್ರತಿನಿಧಿ, ಸಿಬ್ಬಂದಿ ವರ್ಗ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಹಕರಿಸಿದರು. ಬೆಳ್ತಂಗಡಿ ತಾಲೂಕಿನ ಸೊಸೈಟಿಯ ಹಾಗೂ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಮತ್ತು ಸಿಇಒ ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪ್ಥಿತರಿದ್ದರು. ಮಡಂತ್ಯಾರು ಸಿ.ಎಂ. ಬ್ಯಾಂಕ್ ಅಧ್ಯಕ್ಷ ಸ್ವಾಗತಿಸಿ, ಶಿಕ್ಷಕ ಧರಣೇಂದ್ರ ಜೈನ್ ಹಾಗೂ ಫ್ರಾನ್ಸಿಸ್ ವಿ.ವಿ. ಕಾರ್ಯಕ್ರಮ ನಿರೂಪಿಸಿದರು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page