July 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪತಿಗೆ ಕತ್ತಿಯಿಂದ ಹಲ್ಲೆ – ಆರೋಪಿ ಪತ್ನಿಯ ಬಂಧನ

ಮಹಿಳೆಯೋರ್ವಳು ತನ್ನ ಪತಿಗೆ ಕತ್ತಿಯಿಂದ ಇರಿದು ಹಲ್ಲೆ ನಡೆಸಿದ ಘಟನೆ ಬಿ. ಸಿ. ರೋಡ್ KSRTC ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ನಿನ್ನೆ ನವೆಂಬರ್ 19ರಂದು ಬುಧವಾರ ರಾತ್ರಿ ನಡೆದಿದೆ. ಆರೋಪಿ ಮಹಿಳೆಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಹಲ್ಲೆಯಿಂದ ಗಾಯಗೊಂಡವರು. ಅವರ ಪತ್ನಿ ಜ್ಯೋತಿ ಕೆ.ಟಿ. ಹಲ್ಲೆ ನಡೆಸಿದ ಆರೋಪಿ, ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ರಾತ್ರಿ ಏಕಾಏಕಿ ಟೆಕ್ಸ್‌ಟೈಲ್ಸ್ ಅಂಗಡಿಗೆ ಮಾರುವೇಷದಲ್ಲಿ ಬುರ್ಖಾಧಾರಿಯಾಗಿ ಬಂದ ಪತ್ನಿ ಜ್ಯೋತಿ ಕೆ.ಟಿ.ಯವರು ಅಂಗಡಿಯ ಕ್ಯಾಶ್ ಕೌಂಟರಿನಲ್ಲಿದ್ದ ಪತಿಗೆ ಕತ್ತಿಯಿಂದ ಇರಿದಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಬಂಟ್ವಾಳ ನಗರ ತಾಣಾ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿ ಜ್ಯೋತಿ ಸೋಮಯಾಜಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೃಷ್ಣ ಕುಮಾರ್ ಸೋಮಯಾಜಿ ಮತ್ತು ಅವರ ಪತ್ನಿ ಜ್ಯೋತಿ ಕೆ.ಟಿ.ಯವರ ಮಧ್ಯೆ ಕೌಟುಂಬಿಕ ವಿಚಾರದಲ್ಲಿ ಮನಸ್ತಾಪವಿದ್ದು, ಇದೇ ದ್ವೇಷದಿಂದ ಕೃಷ್ಣ ಕುಮಾರ್ ಸೋಮಯಾಜಿಯವರನ್ನು ಕೊಲ್ಲುವ ಉದ್ದೇಶದಿಂದ ಕತ್ತಿಯಿಂದ ಹಲ್ಲೆ ನಡೆಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 131/2025, eo: 118(1), 118(2), 351(3), 109 ಬಿ.ಎನ್.ಎಸ್-2023, U/s: 2(1), (C), 27 Indian Arms act-1959 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

You may also like

News

ಪುತ್ತೂರಿನಲ್ಲಿ ಯುವತಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಆರೋಪ – ಸತ್ಯಾಂಶ ಬಿಚ್ಚಿಟ್ಟ ಪೊಲೀಸರು

ಉಭಯ ಕಡೆಯಿಂದ ದೂರು ದಾಖಲು! ಸುಳ್ಳು ಸುದ್ದಿ ಅಥವಾ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ – ಜಿಲ್ಲಾ SP ಡಾ. ಅರುಣ್ ಕೆ. ಯುವತಿಯೊಬ್ಬಳು
News

ವೇಗದ ಅಬ್ಬರಕ್ಕೆ ವಿದ್ಯಾರ್ಥಿ ಬಲಿ – ವಾಹನ ಸಮೇತ ಚಾಲಕ ಪರಾರಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐಟಿಐ ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮತ್ತೋರ್ವ ವಿದ್ಯಾರ್ಥಿ

You cannot copy content of this page