December 11, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡದಲ್ಲಿ ಶೇಕಡಾ 95ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ

ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇಕಡಾ 95 ರಷ್ಟು ಮಂದಿ ಫಲಾನುಭವಿಗಳಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದ್ದಾರೆ. ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದಕ್ಷಿಣ ಕನ್ನಡ ಜಿಲ್ಲಾ ಪ್ರಚಾರ ಅಭಿಯಾನಕ್ಕೆ ಇಂದು ನವೆಂಬರ್ 20ರಂದು ಗುರುವಾರ ಸುಳ್ಯ ಗಾಂಧಿನಗರದಲ್ಲಿ ಚಾಲನೆ ನೀಡಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳಿಗೆ ನೋಂದಣಿ ಕಾರ್ಯಕ್ರಮವು ಜಿಲ್ಲೆಯಲ್ಲಿ ಯೋಜನೆಯ ಆರಂಭದಲ್ಲಿಯೇ ಯಶಸ್ವಿಯಾಗಿ ನಡೆದಿದೆ. ಇದಲ್ಲದೆ ಎಲ್ಲಾ ಕಡೆ ಸಾರ್ವಜನಿಕರಿಗೆ ಗ್ಯಾರಂಟಿ ಯೋಜನೆ ನೋಂದಣಿಗೆ ಸಹಾಯವಾಗಲು ಶಿಬಿರಗಳನ್ನು ಏರ್ಪಡಿಸಲಾಗಿತ್ತು. ಇದರಿಂದ ಜಿಲ್ಲೆಯ ಬಹುತೇಕ ಜನರು ಒಂದಲ್ಲೊಂದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಅವರು ಹೇಳಿದರು. ಸರ್ಕಾರದ ಯೋಜನೆಯು ಯಾವುದೇ ಮಧ್ಯವರ್ತಿಗಳ ನೆರವಿಲ್ಲದ ಜನರಿಗೆ ನೇರವಾಗಿ ತಲುಪುತ್ತಿರುವ ಒಂದು ದಾಖಲೆಯ ಕಾರ್ಯಕ್ರಮವಾಗಿದೆ. ಈ ಯಶಸ್ಸಿನಿಂದಾಗಿ ಹಲವಾರು ರಾಜ್ಯಗಳು ಕರ್ನಾಟಕದ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ ಎಂದು ಭರತ್ ಮುಂಡೋಡಿ ತಿಳಿಸಿದರು.

ಗ್ಯಾರoಟಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ, ಮಾಸಿಕ 2,000 ರೂಪಾಯಿ ನೀಡುವ ಗೃಹ ಲಕ್ಷ್ಮಿ ಯೋಜನೆ, ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ  ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಹೇಳಿದರು.

ಸುಳ್ಯ ತಾಲೂಕು ತಹಶೀಲ್ದಾರ್ ಮಂಜುಳಾ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣರವರು ಮಾತನಾಡಿದರು.

ಈ ಸಮಾರಂಭದಲ್ಲಿ ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಸ್ತಫಾ, ಸುಳ್ಯ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ, ರಿಯಾಜ್, ಜಿಲ್ಲಾ ಮತ್ತು ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು ಇದ್ದರು.

ಜಿಲ್ಲಾ ವಾರ್ತಾಧಿಕಾರಿ  ಬಿ.ಎ. ಖಾದರ್ ಶಾ ಸ್ವಾಗತಿಸಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ ವಂದಿಸಿದರು.

You may also like

News

ಬೈಂದೂರು ವೃತ್ತ ನಿರೀಕ್ಷಕರಾಗಿ ಶಿವಕುಮಾರ್ ಅಧಿಕಾರ ಸ್ವೀಕಾರ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್ ಅವರು ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಡಿಸೆಂಬರ್ 3ರoದು ಬುಧವಾರ ಬೈಂದೂರು ವೃತ್ತ
News

ಮಂಗಳೂರಿನಲ್ಲಿ ಪೊಲೀಸ್‌ ಡ್ರಗ್‌ ಬೇಟೆ – 5500 ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ 20 ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

ಪೊಲೀಸರ ವಿನಂತಿಗೆ ಸ್ಪಂದಿಸಿ ಶಾಲೆ–ಕಾಲೇಜುಗಳು ಸ್ವಯಂಪ್ರೇರಿತವಾಗಿ ಪರೀಕ್ಷೆ ನಡೆಸಿದ್ದು ಶ್ಲಾಘನೀಯ ಪಾಸಿಟಿವ್‌ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಪ್ರಾರಂಭಿಸಿದ್ದು ಅಧಿಕಾರಿಗಳ ನಿರಂತರ ನಿಗಾ ಮಂಗಳೂರು ನಗರದಲ್ಲಿ ಶಾಲಾ ಮತ್ತು ಕಾಲೇಜು

You cannot copy content of this page