August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನವೆಂಬರ್ 23ರಂದು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ಮಂಗಳೂರಿನಲ್ಲಿ ‘ನಮೋ ಚೆಸ್ ಟೂರ್ನಮೆಂಟ್’ ಆಯೋಜನೆ

ಸಂಸದ್‌ ಕ್ರೀಡಾ ಮಹೋತ್ಸವ ಪ್ರಯುಕ್ತ ನವೆಂಬರ್ 23ರಂದು ಭಾನುವಾರ ಮಂಗಳೂರು ನಗರದಲ್ಲಿ ‘ನಮೋ ಚೆಸ್‌ ಟೂರ್ನಮೆಂಟ್‌’ ಆಯೋಜಿಸಲಾಗಿದೆ. ನಗರದ ಯುಎಸ್‌ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ ಚೆಸ್‌ ಟೂರ್ನಮೆಂಟ್‌ ನಡೆಯಲಿದೆ.

ಈಗಾಗಾಲೇ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು 500ಕ್ಕೂ ಹೆಚ್ಚು ಆಸಕ್ತರಿಂದ ನೋಂದಾವಣೆಯಾಗಿದ್ದು, ಸಬ್ ಜ್ಯೂನಿಯರ್ (U-10) Boys & Girls, ಜ್ಯೂನಿಯರ್ (U-15) Boys & Girls, ಓಪನ್ ಕೆಟಗರಿ ಈ ಮೂರು ವಿಭಾಗದಲ್ಲಿ ಟೂರ್ನಮೆಂಟ್‌ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಅಂದು ಬೆಳಗ್ಗೆ 8ಕ್ಕೆ ತಪ್ಪದೇ ಕಡ್ಡಾಯವಾಗಿ ಹೆಸರು ನೋಂದಾಯಿಸಬೇಕಾಗಿದ್ದು 8.30 ಕ್ಕೆ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ನಡೆಯಲಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತಕ್ಕಾಗಿ ಫಿಟ್‌ ಯುವ ಪರಿಕಲ್ಪನೆಯಡಿ ಈ ಕ್ರೀಡಾ ಮಹೋತ್ಸವ ಆಯೋಜಿಸಲಾಗಿದೆ. ನವೆಂಬರ್ 23ರ ಬಳಿಕ ಪ್ರತಿ ವಾರವು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ವಾಲಿಬಾಲ್, ತ್ರೋಬಾಲ್, ಕುಸ್ತಿ, ಕಬ್ಬಡ್ಡಿ, ಹಗ್ಗ – ಜಗ್ಗಾಟ, ಕ್ರಿಕೆಟ್, ಬ್ಯಾಡ್ಮಿಂಟನ್ ಪಂದ್ಯಾಟಗಳನ್ನು ಆಯೋಜಿಸಲಾಗುತ್ತದೆ.  ಈ ವಾರ ಚೆಸ್ ಟೂರ್ನಮೆಂಟ್ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳು, ಯುವಕರು ಸೇರಿ ಕ್ರೀಡಾಸಕ್ತರು ಈ ಟೂರ್ನಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಚೆಸ್ ಅಸೋಸಿಯೇಷನ್ ಉಪಾಧ್ಯಕ್ಷ ರಮೇಶ್ ಕೋಟೆ, ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಸುನೀಲ್ ಅಚಾರ್, ಜಿಲ್ಲಾಧ್ಯಕ್ಷ ಅಮರಶ್ರೀ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page