September 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯ ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿಯ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ನವೆಂಬರ್ 23ರಂದು ಭಾನುವಾರ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ. ಮಹಮ್ಮದ್ ಮಿಫ್ರಾ ದಂತ ವೈದ್ಯರು, ಡಾ. ಅಪ್ಸಲ್ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನೆಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 200ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ., ವೈದ್ಯಾಧಿಕಾರಿ ಡಾ. ಶಿವಾನಂದಸ್ವಾಮಿ, ಯೆನೆಪೋಯ ಸಂಸ್ಥೆಯ ವೈದ್ಯಕೀಯ ಸಮಾಜ ಸೇವಕರಾದ ಗಾಯತ್ರಿ ಪೂಜಾರಿ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಸಿಂಧು ವಿ.ಎಂ. ಕಾರ್ಯಕ್ರಮ ನಿರೂಪಿಸಿದರು.

You may also like

News

Japanese Delegation from Kyoto Kagaku Visits Father Muller Charitable Institutions

A delegation from Kyoto Kagaku, Japan, visited the Father Muller Charitable Institutions (FMCI) on Monday, September 7, 2026. The delegation
News

ದಕ್ಷಿಣ ಕನ್ನಡ ಕಾಂಗ್ರೆಸ್‌ಗೆ ನೂತನ ಸಾರಥಿ – ಪದ್ಮರಾಜ್ ಆರ್. ಪೂಜಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ

You cannot copy content of this page