April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದ ಬೆಳ್ತಂಗಡಿಯ ಶಶಿಕಾಂತ್ ಸುಲ್ಕೇರಿ

ರಾಜ್ಯ ಮಟ್ಟದ 17 ವರ್ಷ ವಯೋಮಾನ ವಿಭಾಗದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಬೆಳ್ತಂಗಡಿಯ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಈಗಾಗಲೇ ತಾಲೂಕು, ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ, ರಾಜ್ಯ ಮಟ್ಟದ ಶಿಕ್ಷಣ ಇಲಾಖೆ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಶಶಿಕಾಂತ್ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಸುಲ್ಕೇರಿ ಪ್ರೌಢಶಾಲೆಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಶಶಿಕಾಂತ್ ಬಾಲ್ಯದಿಂದಲೇ ಕಬಡ್ಡಿ, ಕೋಕೋ ಮತ್ತು ಅನೇಕ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಶಿಕಾಂತ್ ಸುಲ್ಕೇರಿ ಗ್ರಾಮದ ಭಂಡಾರಗೋಳಿ ನಿವಾಸಿ ಶ್ರೀಧರ್ ಮತ್ತು ಪುಷ್ಪ ದಂಪತಿಗಳ ಪುತ್ರನಾಗಿದ್ದು ಬೆಳೆವ ಸಿರಿ ಮೊಳಕೆಯಲ್ಲಿ ಎಂಬಂತೆ ಎಲ್ಲಾ ಕ್ರೀಡಾ ಕ್ಷೇತ್ರದಲ್ಲಿ ಪಾಲ್ಗೊಂಡಿರುತ್ತಾರೆ. ಇದೀಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟವು ಹರಿಯಾಣ ರಾಜ್ಯದಲ್ಲಿ ನಡೆಯಲಿದ್ದು, ನಿನ್ನೆ ನವೆಂಬರ್ 24ರಂದು  ಸೋಮವಾರ ಅವರು ಹರಿಯಾಣಕ್ಕೆ ತೆರಳಿದ್ದಾರೆ. ನವೆಂಬರ್ 27 ರಿಂದ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page