August 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಇಂದು ನವಂಬರ್ 27ರಿಂದ 30ರ ತನಕ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ

ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯದಾದ್ಯಂತ ಮನೆ ಮಾತಾಗಿರುವ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುವ ಮೂಲಕ ನಾಡಿನಾದ್ಯಂತ ಉತ್ತಮ ಹೆಸರು ಗಳಿಸುತ್ತಾ ಬಂದಿದ್ದು, ಇದೀಗ ಎಕ್ಸೆಲ್ ಪದವಿ ಪೂರ್ವ ಕಾಲೇಜು ವತಿಯಿಂದ viಸದಾ ಯಾವುದಾದರೊಂದು ಕಾರ್ಯ ಕ್ರಮಗಳನ್ನು ನೀಡುತ್ತಾ ಬರುತ್ತಿದೆ. ಇದೀಗ ಎಕ್ಸೆಲ್ ಪದವಿ ಪೂರ್ವ ಕಾಲೇಜು ವತಿಯಿಂದ ವಿದ್ಯಾಸಾಗರ ಮತ್ತು ಅರಮಲೆಬೆಟ್ಟ ಆವರಣದಲ್ಲಿ ನಾಲ್ಕು ದಿನಗಳ ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಅಕ್ಷರೋತ್ಸವ ಹಾಗೂ ಎಕ್ಸೆಲ್ ಪರ್ಬ – 2025 ಸಮಾರಂಭ ನೆರವೇರಲಿದೆ. ನವೆಂಬರ್ 27 ರಿಂದ 30ರ ತನಕ ನಡೆಯುವ ಈ ಕಾರ್ಯಕ್ರಮದಲ್ಲಿ ಸಾಹಿತ್ಯ, ಯಕ್ಷಗಾನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನವೆಂಬರ್ 27ರಂದು ಬೆಳಗ್ಗೆ 9ಕ್ಕೆ ಆಮಂತ್ರಣ ಪರಿವಾರದ ದಶಮಾನೋತ್ಸವ ಸಂಭ್ರಮದ ಸಹಯೋಗದಲ್ಲಿ ಯಕ್ಷಗಾನ ನಾಟ್ಯ ವೈಭವ ನಡೆಯಲಿದೆ. 10.30ಕ್ಕೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕಾರ್ಯಕ್ರಮವನ್ನು ಸಿನಿ ಸಾಹಿತಿ ಹಾಗೂ ಚಲನಚಿತ್ರ ನಿರ್ದೇಶಕ ಯೋಗರಾಜ್ ಭಟ್ ಉದ್ಘಾಟಿಸಲಿದ್ದಾರೆ. ವಿಜಯವಾಣಿ ದೈನಿಕ ಮಂಗಳೂರು ಇದರ ಸ್ಥಾನೀಯ ಸಂಪಾದಕ  ಸುರೇಂದ್ರ ಎಸ್. ವಾಗ್ಲೇ ನೂತನ ಗ್ರಂಥಗಳ ಲೋಕಾರ್ಪಣೆ ಮಾಡಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಶ್ರೀನಾಥ್ ಎಂ.ಪಿ. ಎಕ್ಸೆಲ್ ಅಕ್ಷರ ಗೌರವ – 2025 ಪ್ರಧಾನ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕ.ಸಾ.ಪ.  ಅಧ್ಯಕ್ಷರಾದ ಯದುಪತಿ ಗೌಡ, ಗೌರವ ಉಪಸ್ಥಿತಿಯಲ್ಲಿ ಹಿರಿಯ ಮುತ್ಸದ್ಧಿ ಭುಜಬಲಿ ಧರ್ಮಸ್ಥಳ, ಅಳದಂಗಡಿ ಆಮಂತ್ರಣ ಪರಿವಾರದ ವಿಜಯ್ ಕುಮಾರ್ ಜೈನ್ ಪಾಲ್ಗೊಳ್ಳಲಿದ್ದಾರೆ. ಹಾಗೂ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಗೈದವರಿಗೆ “ಎಕ್ಸೆಲ್ ಅಕ್ಷರ” ಗೌರವ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.

ಮಧ್ಯಾಹ್ನ 2 ಗಂಟೆಗೆ ವಿದ್ಯಾಸಾಗರ ಆವರಣದ ಕುವೆಂಪು ಸಭಾಂಗಣದಲ್ಲಿ ಕನ್ನಡ ಕವಿಗೋಷ್ಠಿ ಹಾಗೂ ಅರಮಲೆ ಬೆಟ್ಟ ಆವರಣದಲ್ಲಿ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ. ಸಂಜೆ 4.30 ರಿಂದ ಅರಮಲೆ ಬೆಟ್ಟ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಡಾ. ಪ್ರದೀಪ್ ನಾವೂರು, ಸುಲ್ಕೇರಿ ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಮೋದ್ ಕುಮಾರ್, ಸುದ್ದಿ ಬಿಡುಗಡೆ ಪತ್ರಿಕೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ರಾಜಕೀಯ ವಿಶ್ಲೇಷಕರಾದ ರಾಘವ್ ಶರ್ಮಾ ಭಾಗವಹಿಸಲಿದ್ದಾರೆ.

ನವೆಂಬರ್ 28ರಂದು ಮಧ್ಯಾಹ್ನ 1.30ಕ್ಕೆ ಜರಗಲಿರುವ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಬೆಳಗಾವಿ ನಿಡುಸೋಸಿ ಮಠದ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೆಳ್ತಂಗಡಿಯ ಮುಖ್ಯ ಉಪಾಧ್ಯಾಯ ವಂದನೀಯ ಫಾದರ್ ಕ್ಲಿಫರ್ಡ್ ಸಿಮೋನ್ ಪಿಂಟೋ, ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೆಳ್ತಂಗಡಿಯ ಮುಖ್ಯ  ಉಪಾಧ್ಯಾಯರು ಲಕ್ಷೀ ನಾರಾಯಣ ಕೆ. ಇವರು ಭಾಗ ವಹಿಸಲಿದ್ದಾರೆ. ಸಂಜೆ 6.30ಕ್ಕೆ ನಡೆಯುವ ಎಕ್ಸೆಲ್ ಪರ್ಬ ಸಮಾರಂಭವನ್ನು ನಟ ರಮೇಶ್ ಅರವಿಂದ್ ಉದ್ಘಾಟಿಸಲಿದ್ದು, ಭಾರತ ಪರಿಕ್ರಮ ಯಾತ್ರಾ ಸಾಧಕ ಸೀತಾರಾಮ ಕೆದಿಲಾಯ, ಡಿಡಿಪಿಐ ಶಶಿಧರ್ ಜಿ.ಎಸ್., ಪತ್ರಕರ್ತ ಯೋಗೀಶ್ ಹೊಳ್ಳ ಎಂ. ಭಾಗವಹಿಸಲಿದ್ದಾರೆ.

ನವೆಂಬರ್ 29ರಂದು ಮಧ್ಯಾಹ್ನ 1.30ಕ್ಕೆ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ – ಚಿಕ್ಕಮಗಳೂರು ಸಂಸದ ಕೊಟಾ ಶ್ರೀನಿವಾಸ ಪೂಜಾರಿ, ಅಡಿಷನಲ್ ಎಸ್.ಪಿ. ಅನಿಲ್ ಕುಮಾರ್ ಭೂಮ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ., ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಸುವರ್ಣ, ವೆನ್ಲಾಕ್ ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಸದಾನಂದ ಪೂಜಾರಿ, ಮೂಡಬಿದಿರೆಯ ಲೆಕ್ಕ ಪರಿಶೋಧಕ ಆಕಾಶ್ ದೀಪ್ ಭಾಗವಹಿಸಲಿದ್ದಾರೆ.

ನವೆಂಬರ್ 30ರಂದು ಸಂಜೆ 6.30ಕ್ಕೆ ಜರಗುವ ಕಾಲೇಜು ವಾರ್ಷಿಕೋತ್ಸವದಲ್ಲಿ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಾಲ್ಕೂ ದಿನವೂ ಬೆಳಗ್ಗೆ 9ರಿಂದ ರಾತ್ರಿ 10.30ರ ತನಕ ಸಭಾ ಕಾರ್ಯಕ್ರಮಗಳ ಜೊತೆಗೆ ಎಕ್ಸೆಲ್ ವಿದ್ಯಾರ್ಥಿಗಳ ಸಾಂಸ್ಕೃತಿಕ ವೈವಿಧ್ಯಗಳೊಂದಿಗೆ ನಡೆಯಲಿದೆ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ ಮಾತನಾಡಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕೂಡ ಭಾಗವಹಿಸಬಹುದಾಗಿದೆ ಎಂದರು. ಅರಮಲೆಬೆಟ್ಟ ಕ್ಯಾಂಪಸ್ ನ ಉಪಪ್ರಾಂಶುಪಾಲ ಲೋಹಿತ್ ಉಪಸ್ಥಿತರಿದ್ದರು.

You may also like

News

ನೇಪಾಳದ ದುಃಖದಲ್ಲಿ ಮಂಗಳೂರು ಧರ್ಮಕ್ಷೇತ್ರವೂ ಭಾಗಿ – ವಿಶೇಷ ಪ್ರಾರ್ಥನೆಗೆ ಬಿಷಪ್ ಸಲ್ಡಾನ್ಹಾ ಕರೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ರೂಪೇಶ್ ಮಾಡ್ತಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ಮಂಗಳೂರು: ನೇಪಾಳದ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ
News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.

You cannot copy content of this page