August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಮಂಜೂರಿನ ಸೈಂಟ್ ರೈಮಂಡ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ

ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಮೊದಲು ಗೌರವ ನೀಡಿ” – ರಘು ಸಾಲಿಯಾನ್ ವಾಮಂಜೂರು

ವಾಮಂಜೂರಿನ ಸೈಂಟ್ ರೈಮಂಡ್ಸ್ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ 2025-26ನೇ ಸಾಲಿನ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವು ನವೆಂಬರ್ 29ರಂದು ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ವಂದನೀಯ ಭಗಿನಿ ಸಿಸಿಲಿಯಾ ಮೆಂಡೊನ್ಸಾ ಬಿಎಸ್ ಇವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಮಕ್ಕಳಾ ಸಾಧನೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಾಮಂಜೂರಿನ ಸಾಮಾಜಿಕ ಮುಂದಾಳು ರಘು ಸಾಲಿಯಾನ್ ಮಕ್ಕಳಿಗೆ ಬಹುಮಾನ ನೀಡಿ, “ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಮೊದಲು ಗೌರವ ನೀಡಬೇಕು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.  ಸ್ಥಳೀಯ ಕಾನ್ವೆಂಟಿನ ಸುಪೀರಿಯರ್ ವಂದನೀಯ ಭಗಿನಿ ಲವಿಟ ಮೊರಾಸ್ ಬಿಎಸ್ ಬಹುಮಾನ ನೀಡಿ ಮಕ್ಕಳಿಗೆ ಅಭಿನಂದಿಸಿದರು. ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಂದನೀಯ ಭಗಿನಿ ಮನಿಶ ರೊಡ್ರಿಗಸ್ ಸ್ವಾಗತಿಸಿದರು. ವಂದನೀಯ ಭಗಿನಿ ಸುಷ್ಮಾ ಮೊಂತೇರೊ ವಂದಿಸಿದರು. ರೀಮಾ ಕುಟಿನ್ಹಾ ಕಾರ್ಯಕ್ರಮ ನಿರೂಪಿಸಿದರು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page