August 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಪುವಿನಲ್ಲಿ ಗೂಡ್ಸ್ ಟೆಂಪೋ ಪಲ್ಟಿ – ನಾಲ್ವರು ಮೃತ್ಯು, ಐದು ಮಂದಿಗೆ ಗಾಯ

ಗೂಡ್ಸ್ ಟೆಂಪೋ ಪಲ್ಟಿಯಾಗಿ ನಾಲ್ವರು ಮೃತಪಟ್ಟು ಐದು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್ ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನವೆಂಬರ್ 30ರಂದು ಭಾನುವಾರ ಸಂಭವಿಸಿದೆ.

ಕಾವು ಮಜೂರಿನಿಂದ ಮಲ್ಪೆಗೆ ಡೆಕೊರೇಷನ್‌ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಏರಿ ರಸ್ತೆಯಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿ ಒಟ್ಟು 9 ಮಂದಿ ಕೆಲಸಗಾರರು ಇದ್ದು, ಅವರಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. 9 ಮಂದಿ ಕೆಲಸಗಾರರ ಪೈಕಿ ನಾಲ್ವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

You may also like

News

Father Muller College of Nursing Strengthens Academic Collaborations Through Two more Strategic MoUs on Palliative Care and Counselling

Reinforcing its commitment to holistic nursing education, interdisciplinary learning, and community-oriented healthcare, Father Muller School & College of Nursing (FMCON)
News

ಮುದರಂಗಡಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಗೆ ಬಲಿ

ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿರುವ ಘಟನೆ ಇಂದು ಆಗಸ್ಟ್ 7ರಂದು

You cannot copy content of this page