August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು MDMA ಕೇಸ್ – ಐದು ಆರೋಪಿಗಳಿಗೆ 12 ರಿಂದ 14 ವರ್ಷದ ಜೈಲು ಶಿಕ್ಷೆ

ಮಂಗಳೂರು ಸತ್ರ ನ್ಯಾಯಾಲಯದ ಕಠಿಣ ತೀರ್ಪು

ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

2022ರ ಜೂನ್ 14ರಂದು ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ದ್ರವ್ಯವಾದ MDMA ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿಗಳು ಪತ್ತೆಹಚ್ಚಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದರು. ಈ ಸಂಬಂಧ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 54/2022 ರ ಪ್ರಕರಣ ಮಂಗಳೂರಿನ ಮಾನ್ಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿತ್ತು.

ವಿಚಾರಣೆ ಪೂರ್ಣಗೊಂಡ ನಂತರ, 2025ರ ಡಿಸೆಂಬರ್ 6ರಂದು, ಒರ್ವ ಸುಡಾನ್ ದೇಶದ ಪ್ರಜೆ ಸೇರಿ ಒಟ್ಟು ಐದು ಆರೋಪಿಗಳಿಗೆ 12 ರಿಂದ 14 ವರ್ಷಗಳ ತನಕ ಕಠಿಣ ಶಿಕ್ಷೆ ಮತ್ತು ದಂಡವನ್ನು ಮಾನ್ಯ ನ್ಯಾಯಾಲಯವು ವಿಧಿಸಿದೆ.

ಈ ಪ್ರಕರಣದಲ್ಲಿ ಅಭಿಯೋಜನೆ ಪರವಾಗಿ ಸಮರ್ಥವಾಗಿ ವಾದ ಮಂಡಿಸಿ, ಆರೋಪಿಗಳ ಮೇಲಿನ ಅಪರಾಧಗಳನ್ನು ಸಾಕ್ಷ್ಯಾಧಾರಗಳ ಮೂಲಕ ಸಾಬೀತು ಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ IPS ಅವರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಿಥುನ್ IPS ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ರವೀಶ್ ನಾಯಕ್, ACP ಸೆನ್ ಪೊಲೀಸ್ ಠಾಣೆ ಉಪಸ್ಥಿತರಿದ್ದರು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page