January 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಪೋಸ್ಟ್‌ ಪ್ರಕರಣ — ವಿದೇಶದಿಂದ ಬಂದ ಆರೋಪಿ ಫೆಲಿಕ್ಸ್ ಮಥಾಯಿಸ್ ಬಂಧನ

2024ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಹಾಗೂ ದ್ವೇಷ ಭಾವ ಉಂಟುಮಾಡುವ ಪೋಸ್ಟ್ ಹಾಕಿದ್ದ ಪ್ರಕರಣದಲ್ಲಿ ಆರೋಪಿ 56 ವರ್ಷ ಪ್ರಾಯದ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.

2024ರ ಫೆಬ್ರವರಿಯಲ್ಲಿ ಈ ಘಟನೆಯ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಅ.ಕ್ರ. 29/2024ರಲ್ಲಿ ಐಪಿಸಿ 153(ಎ), 504, 507, 509 ಹಾಗೂ ಐಟಿ ಕಾಯ್ದೆ 66(ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಸಮಯದಲ್ಲಿ ಆರೋಪಿಯು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಕಾರಣ ಬಂಧನ ಸಾಧ್ಯವಾಗಿರಲಿಲ್ಲ.

ಮುಂಬಯಿ ಚಾರ್ಕೋಪ್ ಮೂಲದ ಫೆಲಿಕ್ಸ್ ಮಥಾಯಿಸ್ ವಿರುದ್ಧ ಲುಕ್ ಔಟ್ ಸರ್ಕ್ಯುಲರ್ (LOC) ಹೊರಡಿಸಲಾಗಿತ್ತು. ನಂತರ ವಿದೇಶದಿಂದ ಮುಂಬಯಿ ಸಹರಾ ವಿಮಾನ ನಿಲ್ದಾಣಕ್ಕೆ ಬಂದಾಗ ಇಮಿಗ್ರೇಶನ್ ಅಧಿಕಾರಿಗಳು ಅವನನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರನ್ವಯ ಮಂಗಳೂರು ಪೊಲೀಸರು ಡಿಸೆಂಬರ್ 05ರಂದು ಶುಕ್ರವಾರ ದಸ್ತಗಿರಿ ಮಾಡಿ ಮಂಗಳೂರಿಗೆ ಕರೆತಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಲ್ಲದೇ ಪಾಸ್‌ಪೋರ್ಟ್‌ ಅನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ.

ಇದೇ ಪ್ರಕರಣದಲ್ಲಿ ಇನ್ನೊಬ್ಬ ಆರೋಪಿ 57 ವರ್ಷ ಪ್ರಾಯದ ಎವ್ಜಿನ್ ಜಾನ್ ಡಿಸೋಜ ನನ್ನು ದಿನಾಂಕ 11-08-2024ರಂದು ಬಂಧಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

You may also like

News

ಸೂರಿಕುಮೇರುವಿನ ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಬ್ರಷ್ಟಾಚಾರದ ಆರೋಪ ಸಂಪೂರ್ಣ ಸುಳ್ಳು – ಹಿಂದಿನ ಆಡಳಿತ ಮಂಡಳಿಯ ಖಡಕ್ ಸ್ಪಷ್ಟನೆ

ಬ್ರಷ್ಟಾಚಾರ ನಡೆದಿದ್ದರೆ ಧರ್ಮಾಧ್ಯಕ್ಷರ ಮೌನ ಹೇಗೆ ಸಾಧ್ಯ? – ಅಪಪ್ರಚಾರಕರಿಗೆ ಭಕ್ತಾಧಿಗಳ ನೇರ ಸವಾಲು ನಿಷ್ಟಾವಂತ ಸೇವೆ ನೀಡಿದ ಹಿಂದಿನ ಧರ್ಮಗುರುಗಳ ಹೆಸರುಗಳಿಗೆ ಮಸಿ ಬಳಿಸಲು ಷಡ್ಯಂತ್ರ
News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ

You cannot copy content of this page